ಬೆಂಗಳೂರು:- ರಾಜ್ಯ ಸರ್ಕಾರವು ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಅಧಿಕಾರಿ ಮತ್ತು ನೌಕರರಿಗೆ ಶಾಕ್ ಕೊಟ್ಟಿದ್ದು, ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸುವಂತೆ ಆದೇಶ ಹೊರಡಿಸಿದೆ.
ಸಿಎಂ ಸೂಚನೆ ಮೇರೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಆದೇಶಿಸಿದ್ದಾರೆ. ಆ ಹುದ್ದೆಗೆ ಹಾಲಿ ಸರ್ಕಾರಿ ಅಧಿಕಾರಿಗಳು, ನೌಕರರನ್ನೇ ನಿಯೋಜಿಸಲು ಆದೇಶದಲ್ಲಿ ಸೂಚಿಸಿದ್ದಾರೆ.
ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ನಿವೃತ್ತ ಸರ್ಕಾರಿ ನೌಕರರನ್ಜು ತಕ್ಷಣ ಕರ್ತವ್ಯದಿಂದ ಬಿಡುಗಡೆಗೊಳಿಸಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಸೇರಿದಂತೆ ರಾಜ್ಯ ಸರ್ಕಾರ ಕೆಲವು ಇಲಾಖೆಗಳಲ್ಲಿ ಮತ್ತು ಸಚಿವಾಲಯದಲ್ಲಿ ಅನಗತ್ಯ ಹುದ್ದೆಗಳನ್ನು ಸೃಷ್ಟಿಸಿ ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ನೌಕರರನ್ನು ಸಮಾಲೋಚಕರು, ವಿಶೇಷ ಸಂಪನ್ಮೂಲ ವ್ಯಕ್ತಿಗಳಾಗಿ ನೇಮಿಸಿಕೊಳ್ಳಲಾಗಿದೆ. ಗ್ರೂಪ್ ವೃಂದದ ಕೆಲವು ಹುದ್ದೆಗಳಿಗೂ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಹೀಗೆ ನೇಮಿಸಿಕೊಂಡ ನಿವೃತ್ತ ನೌಕರರಿಗೆ ವೇತನ, ವಾಹನ ಸೇರಿದಂತೆ ಮತ್ತಿರ ಸೌಲಭ್ಯ ನೀಡಲಾಗುತ್ತಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿ ಆರ್ಥಿಕ ಹೊರೆ ಆಗುತ್ತಿದೆ