ಮೈಸೂರು:- ಆರೋಪಿಗೆ ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಗಳ ಬಿಡಿಸಲು ಬಂದ ಪಕ್ಕದ ಮನೆಯ ಮಹಿಳೆಯನ್ನೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದ ಪ್ರಕರಣ ಸಂಬಂಧ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ. ಲಷ್ಕರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣ ಆರೋಪಿ ಆಲ್ವಿನ್ ಜೀವಾವಧಿ ಶಿಕ್ಷೆಗೆ ಒಳಗಾದ ಅಪರಾಧಿಯಾಗಿದ್ದು, 50 ಸಾವಿರ ರೂಪಾಯಿ ದಂಡ ಕೂಡ ವಿಧಿಸಲಾಗಿದೆ.
ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಅಪರಾಧಿ ಆಲ್ವಿನ್ 2020ರ ಅಕ್ಟೋಬರ್ 17 ರಂದು ತನ್ನ ಪತ್ನಿಯ ಜೊತೆ ಜಗಳವಾಡುತ್ತಿದ್ದನು. ಈ ವೇಳೆ ಪಕ್ಕದ ಮನೆಯ ಮಹಿಳೆ ಜಗಳ ಬಿಡಿಸಲು ಮಧ್ಯಪ್ರವೇಶಿಸಿದ್ದರು. ಇದರಿಂದ ಇನ್ನಷ್ಟು ಆಕ್ರೋಶಗೊಂಡ ಆಲ್ವಿನ್, ಆ ಮಹಿಳೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದನು.