2023ರ ಅತ್ಯುತ್ತಮ ಏಕದಿನ ತಂಡವನ್ನು ಐಸಿಸಿ ಪ್ರಕಟಿಸಿದ್ದು, ಭಾರತದ 6 ಆಟಗಾರರು ಸ್ಥಾನ ಪಡೆಯುವ ಮೂಲಕ ಪಾರಮ್ಯ ಮೆರೆದಿದ್ದಾರೆ.
ರೋಹಿತ್ ಶರ್ಮಾ ಏಕದಿನ ತಂಡಕ್ಕೆ ನಾಯಕರಾಗಿದ್ದು, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಹಾಗೂ ಕುಲ್ದೀಪ್ ಯಾದವ್ ಸ್ಥಾನ ಪಡೆದಿದ್ದಾರೆ.
ಹೀಗಿದೆ ಏಕದಿನ ತಂಡ
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಟ್ರಾವಿಸ್ ಹೆಡ್, ವಿರಾಟ್ ಕೊಹ್ಲಿ, ಡೇರಿಲ್ ಮಿಚೆಲ್, ಹೆನ್ರಿಕ್ ಕ್ಲಾಸೆನ್, ಮಾರ್ಕೊ ಯಾನ್ಸೆನ್, ಆಡಂ ಝಂಪಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ.
ಟಿ-20 ತಂಡದಲ್ಲಿ ನಾಲ್ವರಿಗೆ ಸ್ಥಾನ
ಐಸಿಸಿಯು ವರ್ಷದ ಟಿ-20 ಕ್ರಿಕೆಟ್ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ನಾಲ್ವರು ಭಾರತೀಯ ಆಟಗಾರರು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಭಾರತದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರಿಗೆ ನಾಯಕತ್ವ ಪಟ್ಟ ನೀಡಲಾಗಿದೆ.
ಹೀಗಿದೆ ಟಿ-20 ತಂಡ
ಸೂರ್ಯಕುಮಾರ್ ಯಾದವ್ (ನಾಯಕ), ಯಶಸ್ವಿ ಜೈಸ್ವಾಲ್, ಫಿಲ್ ಸಾಲ್ಟ್, ನಿಕೋಲಸ್ ಪುರನ್, ಮಾರ್ಕ್ ಚಾಪ್ಮನ್, ಸಿಕಂದರ್ ರಾಸ್, ಅಲ್ಪೇಶ್ ರಾಮ್ಜಾನಿ, ಮಾರ್ಕ್ ಅದೈರ್, ರವಿ ಬಿಷ್ಣೋಯ್, ರಿಚರ್ಡ್ ನಾಗರಾವ, ಅರ್ಷದೀಪ್ ಸಿಂಗ್.