ಗದಗ: ಸೆಂಟ್ರಲ್ ಇಕ್ಯುಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಿದ್ದ 35 ಲಕ್ಷ ರೂಪಾಯಿ ಮೌಲ್ಯದ 210 ಮೊಬೈಲ್ ಸೇರಿದಂತೆ ಗದಗ ಜಿಲ್ಲೆಯ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ವಿವಿಧ ವಸ್ತುಗಳನ್ನ ಮೂಲ ವಾರಸುದಾರರಿಗೆ ಹಿಂತಿರುಗಿಸಲಾಯ್ತು. ಗದಗ ಎಸ್ ಪಿ ಕಚೇರಿ ಆವರಣದಲ್ಲಿ ಆಯೋಜನೆಗೊಂಡಿದ್ದ ಸ್ವತ್ತು ಮರಳಿಸುವ ಕಾರ್ಯಕ್ರಮದಲ್ಲಿ ಎಡಿಜಿಪಿ ಎಸ್ ಮುರುಗನ್ ಅವರ ಸಮ್ಮುಖದಲ್ಲಿ ಮೂಲ ಮಾಲೀಕರಿಗೆ ವಸ್ತುಗಳನ್ನ ಹಸ್ತಾಂತರಿಸಲಾಯ್ತು.
ಜಿಲ್ಲಾ ಪ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಮೊಬೈಲ್, ಮುಂಡರಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಮೂರು ಟ್ರ್ಯಾಕ್ಟರ್ ಟ್ರೇಲರ್, ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ 10 ಬೈಕ್ ಗಳು, ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಚಿನ್ನದ ಮಾಂಗಲ್ಯ, ಬೆಳ್ಳಿ ಮೂರ್ತಿಯನ್ನ ಮಾಲಿಕರಿಗೆ ಹಿಂತಿರುಗಿಸಲಾಯ್ತು. ಒಟ್ಟು 45 ಲಕ್ಷ ರೂಪಾಯಿ ಮೌಲ್ಯದ ವಿವಿಧ ವಸ್ತುಗಳನ್ನ ಮರಳಿಸಲಾಯ್ತು. ಸ್ವತ್ತು ಹಿಂತಿರುಗಿಸುವ ಕಾರ್ಯಕ್ರಮದಲ್ಲಿ ಉತ್ತರ ವಲಯ ಐಜಿಪಿ ವಿಕಾಸ್ ಕುಮಾರ್,
ಎಸ್ಪಿ ಬಿ ಎಸ್ ನೇಮಗೌಡ, ಎಎಸ್ ಪಿ ಎಂಬಿ ಸಂಕದ್ ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಎಡಿಜಿಪಿ ಮುರುಗನ್ ಸಿಇಐಆರ್ ತಂತ್ರಾಂಶ ಬಳಸಿಕೊಂಡು ಕಳ್ಳತನವಾದ ಮೊಬೈಲ್ ಗಳನ್ನು ಪತ್ತೆಹಚ್ಚಿ, ಅವುಗಳನ್ನು ಮರಳಿಸುವಲ್ಲಿ ಗದಗ ಜಿಲ್ಲೆ ರಾಜ್ಯದಲ್ಲಿಯೇ ಎರಡನೆ ಸ್ಥಾನದಲ್ಲಿದೆ ಎಂದು ಅವರು ಪ್ರಸಂಶಿದರು. ಸಮಾರಂಭದಲ್ಲಿ ಬೆಳಗಾವಿ ಐಜಿಪಿ ವಿಕಾಸಕುಮಾರ್ ಹಾಗೂ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.