ಕಲಬುರಗಿ :– ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ನಿರ್ಮಿಸಿರುವ ಸಿಟಿ ಬಸ್ ನಿಲ್ದಾಣವನ್ನ ಸಚಿವ ರಾಮಲಿಂಗಾರೆಡ್ಡಿ ಇವತ್ತು ಉದ್ಘಾಟನೆ ಮಾಡಲಿದ್ದಾರೆ. ಥೇಟ್ ಕೋಟೆ ತರ ಕಾಣುವ ಈ ಬಸ್ ನಿಲ್ದಾಣವನ್ನ 20 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ..
ಎರಡು ಅಂತಸ್ತಿನ ಈ ಬಸ್ ನಿಲ್ದಾಣದ ವಿಸ್ತೀರ್ಣ4,455 ಚ.ಮೀ ಇದೆ. ಏಕಕಾಲದಲ್ಲಿ 12 ಬಸ್ ನಿಲುಗಡೆ ಮಾಡಬಹುದಾಗಿದ್ದು ಒಟ್ಟಾರೆ 9 ಅಂಕಣಗಳಿವೆ. ಇದಲ್ಲದೆ ವಾಣಿಜ್ಯ ಸಂಕೀರ್ಣ ಶುದ್ಧ ಕುಡಿಯುವ ನೀರಿನ ಘಟಕ ಉದ್ಯಾನವನ ಸಹ ಒಳಗೊಂಡಿದೆ.ಈ ಬಸ್ ನಿಲ್ದಾಣದಿಂದ ಪ್ರತಿನಿತ್ಯ 450 ಬಸ್ ಟ್ರಿಪ್ ಮಾಡಬಹುದಾಗಿದೆ ಅಂತ ಸಾರಿಗೆ ಇಲಾಖೆ ತಿಳಿಸಿದೆ..