ಬೆಂಗಳೂರು:- ಬಿಎಂಟಿಸಿ ಅಧಿಕಾರಿಗಳು, ಬಸ್ನಲ್ಲಿ ಪ್ರಯಾಣಿಸುವ ಅಪ್ರಾಪ್ತರ ಮೇಲೆ ನಿಗಾ ಇರಿಸಲು ಮುಂದಾಗಿದ್ದಾರೆ.
ಒಂಟಿಯಾಗಿ ಸಂಚರಿಸುವ ಅಪ್ರಾಪ್ತರ ಮೇಲೆ ನಿಗಾ ಇರಿಸಲು ಮುಂದಾದ ಬಿಎಂಟಿಸಿ ಅಧಿಕಾರಿಗಳು, ಅನುಮಾನಾಸ್ಪದ ಓಡಾಟ ಕಂಡು ಬಂದರೆ ಮಕ್ಕಳ ಸಹಾಯವಾಣಿಗೆ ತಿಳಿಸುವಂತೆ ಬಸ್ ಚಾಲಕ ಹಾಗೂ ನಿರ್ವಾಹಕರಿಗೆ ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.
ಶಾಲಾ ಸಮವಸ್ತ್ರದಲ್ಲಿರುವ ಮಕ್ಕಳನ್ನ ಹೊರತು ಪಡಿಸಿ ಬಸ್ಗಳಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ಒಬ್ಬಂಟಿಯಾಗಿ ಪ್ರಯಾಣಿಸುತ್ತಿರುವ ಮಕ್ಕಳ ಮೇಲೆ ಹೆಚ್ಚಿನ ನಿಗಾ ಇರಿಸಬೇಕು. ಮಕ್ಕಳ ಹಾವ-ಭಾವದಲ್ಲಿ ಗೊಂದಲಗಳಿದಲ್ಲಿ ಅಥವಾ ಅನುಮಾನಸ್ಪದವಾಗಿ ಪ್ರಯಾಣಿಸುತ್ತಿವುದು ಕಂಡುಬಂದಲ್ಲಿ ಅಂತಹ ಮಕ್ಕಳನ್ನ ಗುರುತಿಸಿ ಅವರ ಬಳಿ ಮಾತನಾಡಿ ಪೋಷಕರ ಬಗ್ಗೆ ಮಾಹಿತಿಯನ್ನ ಪಡೆಯಬೇಕು. ಮಕ್ಕಳು ಗೊಂದಲದ ಉತ್ತರವನ್ನ ನೀಡಿದಲ್ಲಿ, ಮಕ್ಕಳ ಸಹಾಯವಾಣಿ ಸಂಖ್ಯೆ 1098ಗೆ ಕರೆ ಮಾಡಬೇಕು. ಹತ್ತಿರದ ಪೊಲೀಸ್ ಠಾಣೆಗೆ ಅಂತಹ ಮಕ್ಕಳ ಕರೆದೊಯ್ಯುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಇನ್ನೂ ಇತ್ತೀಚೆಗೆ ಟ್ಯೂಷನ್ಗೆ ತೆರಳಿದ್ದ ವೈಟ್ಫೀಲ್ಡ್ನ ನಿವಾಸಿ 12 ವರ್ಷದ ಬಾಲಕ ಪರಿಣವ್ ನಾಪತ್ತೆಯಾಗಿದ್ದನು. ಬಳಿಕ ಈತನನ್ನು ಹೈದರಾಬಾದ್ನಲ್ಲಿ ಪತ್ತೆಹಚ್ಚಿ ನಿನ್ನೆ ಬೆಂಗಳೂರಿಗೆ ಕರೆತರಲಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಬಿಎಂಟಿಸಿ ಅಧಿಕಾರಿಗಳು, ಬಸ್ನಲ್ಲಿ ಪ್ರಯಾಣಿಸುವ ಅಪ್ರಾಪ್ತರ ಮೇಲೆ ನಿಗಾ ಇರಿಸಲು ಮುಂದಾಗಿದ್ದಾರೆ.