ಕೊಡಗು: ಕಾಂಗ್ರೆಸ್ ಪಕ್ಷದಲ್ಲಿ ಶೆಟ್ಟರ್ʼಗೆ ಯಾವುದೇ ಅನ್ಯಾಯ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆಯಾಗಿರುವ ವಿಚಾರಕ್ಕೆ ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಅವರಿಗೆ ಟಿಕೆಟ್ ಕೊಟ್ಟಿದ್ದೆವು. ಚುನಾವಣೆಯಲ್ಲಿ ಸೋತರೂ ಶೆಟ್ಟರನ್ನು ಎಂಎಲ್ಸಿ ಮಾಡಿದ್ದೆವು.
ಕಾಂಗ್ರೆಸ್ ಪಕ್ಷದಲ್ಲಿ ಅವರಿಗೆ ಯಾವುದೇ ಅನ್ಯಾಯ ಆಗಿಲ್ಲ. ಒಮ್ಮೆ ಅವರು ನನಗೆ ಬಿಜೆಪಿಯಲಿ ಅವಮಾನ ಆಗಿದೆ ಮತ್ತೆ ಹೋಗಲ್ಲ ಎಂದಿದ್ದರು ಎಂದು ತಿಳಿಸಿದ್ದಾರೆ. ಇನ್ನು ನಿಗಮ ಮಂಡಳಿ ನೇಮಕ ವಿಚಾರ ಸಂಬಂಧ ಮಾತನಾಡಿದ ಸಿಎಂ, ನಾವೇನು ಗುಲಾಮರಾ ಎಂಬ ಸಚಿವ ಕೆ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಒಬ್ವೊಬ್ಬರು ಒಂದೊಂದು ಹೆಸರನ್ನ ಸಜೆಸ್ಟ್ ಮಾಡ್ತಾರೆ.
BREAKING.. Jagadish Shettar: ಅಮಿತ್ ಶಾ ಮಾತುಕತೆ ಯಶಸ್ವಿ: ಕಾಂಗ್ರೆಸ್ʼಗೆ ಗುಡ್ ಬೈ ಹೇಳಿದ ಮಾಜಿ ಸಿಎಂ
ಈ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತೆ ಎಂದು ತಿಳಿಸಿದ್ದಾರೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ರಾಜಕೀಯ ವಲಯದಲ್ಲಿ ಭಾರೀ ಬೆಳವಣಿಗೆಯೊಂದು ನಡೆದಿದೆ. ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ (Jagadish Shettar) ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಈ ವಿಚಾರ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಶೆಟ್ಟರ್ ಕಾಂಗ್ರೆಸ್ ತೊರೆದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಸಂಜೆ ನಾಲ್ಕು ಗಂಟೆಗೆ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.