ಚಾಮರಾಜನಗರ: ಗಣರಾಜ್ಯೋತ್ಸವದಿನದಂದು ಆಕ್ಸಿಜನ್ ದುರಂತದಲ್ಲಿ ಮಡಿದ ಕುಟುಂಬಸ್ಥರಿಗೆ ಗುಡ್ ನ್ಯೂಸ್ ನೀಡಿದೆ. ಹೌದು ಕೋವಿಡ್ ಆಸ್ಪತ್ರೆಯಲ್ಲಿ 2021ರ ಮೇ 2ರಂದು ಆಮ್ಲಜನಕ ಸಕಾಲದಲ್ಲಿ ಪೂರೈಕೆಯಾಗದೆ ಮೃತಪಟ್ಟ 32 ಮಂದಿಯ ಕುಟುಂಬದ ಸದಸ್ಯರಿಗೆ ಫೆ.1ರಿಂದ ಸರ್ಕಾರಿ ಕೆಲಸ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಘೋಷಿಸಿದರು.
ಗಣರಾಜ್ಯೋತ್ಸವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಫೆ.1ರಿಂದ ಅವರು ಜಿಲ್ಲೆಯಲ್ಲಿ ಕೆಲಸ ಮಾಡಬಹುದು. ಸಂತ್ರಸ್ತರ ಕುಟುಂಬದವರು ಜಿಲ್ಲಾಧಿಕಾರಿ ಕಚೇರಿ ಸಂಪರ್ಕಿಸಬೇಕು. ಮುಂದಿನ ದಿನಗಳಲ್ಲಿ ಅವರಿಗೆ ಹೆಚ್ಚು ಅವಕಾಶ ನೀಡಲಾಗುವುದು’ ಎಂದರು.
ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಈ ಕುರಿತು ಪ್ರಸ್ಥಾಪಿಸಿದ್ರು.ಸ್ವತಃ ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆ ವೇಳೆ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಭರವಸೆ ನೀಡಿದ್ರು.ಇಂದು ಧ್ವಜಾರೋಹಣ ಬಳಿಕ ಭಾಷಣದಲ್ಲಿ ಆಕ್ಸಿಜನ್ ದುರಂತದಲ್ಲಿ ಮೃತ ಪಟ್ಟ 32 ಕುಟುಂಬದ ಸದಸ್ಯರಿಗೆ ಕೆಲಸ ನೀಡುವುದಾಗಿ ಘೋಷಣೆ ಮಾಡಿದ್ದಾರೆ.