ಬೆಂಗಳೂರು:- ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ತರಲು ರಾಜ್ಯಾದ್ಯಂತ ಪ್ರವಾಸ ಮಾಡ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಬಿಜೆಪಿ ಕಳೆದ ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನ ಗೆದ್ದಿತ್ತು. ಅದಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲು ಪ್ರಯತ್ನ ಮಾಡುವೆ. ಅದಕ್ಕಾಗಿ ಇಡೀ ರಾಜ್ಯದಲ್ಲಿ ಪ್ರವಾಸ ಮಾಡುವೆ. ಪಕ್ಷದ ಸೂಚನೆಯಂತೆ ಸಂಘಟನಾತ್ಮಕ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದರು.
ಕಾರ್ಯಕರ್ತರ ಆಶಯ, ಧ್ವನಿ, ರಾಜ್ಯ ನಾಯಕರ ಕರೆ, ರಾಷ್ಟ್ರೀಯ ನಾಯಕರ ಕರೆಗೆ ಸ್ಪಂದಿಸಿ ಬಿಜೆಪಿಗೆ ಮರಳಿದ್ದೇನೆ. ನೀವು ಹಿರಿಯ ನಾಯಕರು, ನಿಮಗೆ ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ, ಗೌರವ ನೀಡುತ್ತೇವೆ ಎಂದು ಪಕ್ಷದ ಹಿರಿಯರು ತಿಳಿಸಿದ್ದಾರೆ ಎಂದರು