ಶಿವಮೊಗ್ಗ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಘವೇಂದ್ರರನ್ನು ಗೆಲ್ಲಿಸಲು ಶ್ಯಾಮನೂರು ಕರೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಶಾಸಕ ಶ್ಯಾಮನೂರು ಶಿವಶಂಕರಪ್ಪ ಅಭಿವೃದ್ಧಿ ಕೆಲಸಗಳು ಶಿವಮೊಗ್ಗ ಜಿಲ್ಲೆಯಲ್ಲಿ ಆಗಿರುವುದನ್ನು ಗಮನಿಸಿ ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ, ಮುಂದೆಯೂ ಇವರನ್ನು ಆಯ್ಕೆ ಮಾಡಬೇಕಿರುವುದು ಸಾರ್ವಜನಿಕರ ಕರ್ತವ್ಯ ಎಂದಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಿರುವ ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಅವರನ್ನು ಗೆಲ್ಲಿಸಿ ಎಂದು ಹೇಳಿದರು.
ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿರುವ ಶಾಮನೂರು ಶಿವಶಂಕರಪ್ಪ ಗುರು ಬಸವಶ್ರೀ ಪ್ರಶಸ್ತಿ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಶ್ಯಾಮನೂರು ಶಿವಮೊಗ್ಗದ ಬೆಕ್ಕಿನಕಲ್ಮಠದಲ್ಲಿ ನಡೆದ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಹೇಳಿಕೆ ನೀಡಿದರು.