ದಕ್ಷಿಣ ಕನ್ನಡ :- ಮಂಗಳೂರು ತಾಲೂಕಿನ ಹಳೆಯಂಗಡಿ ಸಮೀಪದಲ್ಲಿ ದೈವ ನರ್ತನ ಮುಗಿಸುತ್ತಿದ್ದಂತೆ ಖ್ಯಾತ ದೈವ ನರ್ತಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಜರುಗಿದೆ.
ಅಶೋಕ್ ಬಂಗೇರ ಸಾವನ್ನಪ್ಪಿದ ದೈವ ನರ್ತಕ(47). ನಿನ್ನೆ ಹಳೆಯಂಗಡಿ ಸಮೀಪ ರಕ್ತೇಶ್ವರಿ ದೈವ ನೇಮ ಹಮ್ಮಿಕೊಳ್ಳಲಾಗಿತ್ತು. ದೈವ ನರ್ತನದ ವೇಳೆಯೇ ಎದೆನೋವು ಲಘುವಾಗಿ ಕಾಣಿಸಿಕೊಂಡಿದೆ.
ಇನ್ನು ಎದೆನೋವು ತೀವ್ರವಾಗಿ ಕಾಣಿಸಿಕೊಂಡಿದ್ದರಿಂದ ದೈವ ನೇಮ ಅರ್ಧಕ್ಕೆ ನಿಲ್ಲಿಸಿದ ಅಶೋಕ ಬಂಗೇರಾ ಅವರು ದೈವ ವೇಷವನ್ನು ತೆಗೆದು ಆಸ್ಪತ್ರೆಗೆ ತೆರಳಿದ್ದಾರೆ. ಆದರೆ, ಆಸ್ಪತ್ರೆಗೆ ಸಾಗಿಸುತ್ತಿದ್ದಂತೆ ದೈವ ನರ್ತಕ ಕೊನೆಯುಸಿರೆಳೆದಿದ್ದಾರೆ.