ಬೆಂಗಳೂರು:- 64ನೇ ಹುಟ್ಟು ಹಬ್ಬವನ್ನು ನಾಳೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆದರಿಸಿಕೊಳ್ಳುತ್ತಿದ್ದಾರೆ. ಹುಟ್ಟು ಹಬ್ಬದ ಅಂಗವಾಗಿ ಅನೇಕ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡಲಿದ್ದಾರೆ.
ಜನ್ಮದಿನದ ಪ್ರಯುಕ್ತ ಶಿಗ್ಗಾವಿ ಹಾಗೂ ಸವಣೂರಿನಲ್ಲಿ ಈಗಾಗಲೇ ಐ ಕ್ಯಾಂಪ್, ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ ಕಾರ್ಯಕ್ರಮ ನೆರವೇರಿಸಲಾಗಿದೆ. ಅಲ್ಲದೇ ತಮ್ಮ ಟ್ರಸ್ಟ್ ವತಿಯಿಂದ 250 ವಿದ್ಯಾರ್ಥಿಗಳಿಗೆ ತಲಾ 5000 ಶಿಷ್ಯವೇತನ ನೀಡಿದ್ದಾರೆ.
ಬುದ್ದಿಮಾಂದ್ಯ ಮಕ್ಕಳೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಳ್ಳಲಿದ್ದು, ಪೌರ ಕಾರ್ಮಿಕರಿಗೆ ಸನ್ಮಾನ ಹಾಗೂ ಸಂಜೆ ಶ್ರೇಷ್ಠ ಕನ್ನಡಿಗ ಪ್ರಶಸ್ತಿ ನೀಡಲಾಗುತ್ತದೆ. ನಂತರ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ನಡೆಯುವ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.