ಯಾದಗಿರಿ: ಇಲ್ಲಿನ ಶಹಾಪುರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಅನ್ನಭಾಗ್ಯ ಯೋಜನೆಯಅಕ್ಕಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರ ರಾಜು ರಾಠೋಡ್ ಅವರನ್ನು ಅರೆಸ್ಟ್ ಮಾಡಿದ್ದಾರೆ.
ಶಹಾಪುರದಲ್ಲಿ ಇತ್ತೀಚೆಗೆ ಅನ್ನಭಾಗ್ಯ ಪಡಿತರ ಅಕ್ಕಿ ಕಳ್ಳತನ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಮಣಿಕಂಠ ರಾಠೋಡ್ ಸಹೋದರ ರಾಜು ರಾಠೋಡ್ ಅವರಿಗೆ ಸೇರಿದ ಶ್ರೀ ಲಕ್ಷ್ಮೀ ತಿಮ್ಮಪ್ಪ ರೈಸ್ ಮಿಲ್ ಮೇಲೆ ಶನಿವಾರ ರಂದು ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ ಅನ್ನಭಾಗ್ಯದ 550 ಕ್ವಿಂಟಾಲ್ ಅಕ್ಕಿ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ.