ಪಾಟ್ನಾ: ನಮ್ಮ ಪಕ್ಷದ ನಾಯಕರ ಅಪೇಕ್ಷೆಯಂತೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಜೆಡಿಯು ಪಕ್ಷದ ಮುಖ್ಯಸ್ಥ ಹಾಗೂ ಬಿಹಾರದ ನಿರ್ಗಮಿತ ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ. ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ ಬಳಿಕ ಬಿಹಾರದ ಪಾಟ್ನಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. INDIA ಒಕ್ಕೂಟದಿಂದಲೂ ಹೊರಗೆ ಬಂದಿದ್ದೇನೆ. ಮಹಾಘಟಬಂಧನ್ನಿಂದಲೂ ಆಚೆ ಬಂದಿದ್ದೇನೆ ಎಂದು ಹೇಳಿದ್ದಾರೆ.
Govt Scheme: ಬ್ಯುಸಿನೆಸ್ ಮಾಡುವವರಿಗೆ ಕೇಂದ್ರ ಸರ್ಕಾರದಿಂದ ಲೋನ್.! ಸುಲಭವಾಗಿ ಪಡೆಯಿರಿ 10 ಲಕ್ಷ ರೂ.
ಇಂಡಿಯಾ ಒಕ್ಕೂಟದಿಂದ ಹೊರಬಂದು ನಿತೀಶ್ ಕುಮಾರ್ ಎನ್ಡಿಎ ತೆಕ್ಕೆಗೆ ಮರಳಿದ್ದಾರೆ. ಇನ್ನುಮುಂದೆ ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರ ಆಡಳಿತ ನಡೆಸಲಿದ್ದು, ಇಂದು ಸಂಜೆ ನಿತೀಶ್ ಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಭಾನುವಾರ (ಜ.28) ಬೆಳಗ್ಗೆ ರಾಜಭವನಕ್ಕೆ ತೆರಳಿದ್ದ ನಿತೀಶ್ ಕುಮಾರ್, ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಮೂಲಕ ರಾಷ್ಟ್ರೀಯ ಜನತಾ ದಳ ಜೊತೆಗಿನ ಮೈತ್ರಿಯನ್ನು ಕೊನೆಗೊಳಿಸಿದ್ದಾರೆ.