ಮಂಡ್ಯ:- ಜಿಲ್ಲೆಯಲ್ಲಿ ಹನುಮ ಧ್ವಜ ಕೋಲಾಹಲ ಸೃಷ್ಟಿಸಿದೆ. ಸದ್ಯ ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ವಿಪಕ್ಷನಾಯಕ ಆರ್. ಅಶೋಕ್ ಕರೆ ನೀಡಿದ್ದಾರೆ. ನಾಳೆಯ ಪ್ರತಿಭಟನೆಯಲ್ಲಿ ಜೆಡಿಎಸ್ ಸಹ ಭಾಗಿಯಾಗುತ್ತೆ. ಸರ್ಕಾರದ ಹಿಂದೂ ವಿರೋಧಿ ನೀತಿ, ದುರಾಡಳಿತ ವಿರುದ್ಧ ಪ್ರತಿಭಟನೆ ಮಾಡುತ್ತೇವೆ ಎಂದು ಆರ್. ಅಶೋಕ್ ಹೇಳಿದ್ದಾರೆ.
ರಾಷ್ಟ್ರಧ್ವಜ ಇಳಿಸಿ ಹನುಮ ಧ್ವಜ ಹಾರಿಸಲು ತೆರಳುತ್ತಿದ್ದ ಬಿಜೆಪಿ ನಾಯಕರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಶೋಕ್, ಅಶ್ವತ್ಥ್ ನಾರಾಯಣ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ನಾಯಕರು, ಕಾರ್ಯಕರ್ತರನ್ನು ವಾಹನದಲ್ಲಿ ಪೊಲೀಸರು ಕರೆದೊಯ್ದಿದ್ದಾರೆ.
ಹನುಮ ಧ್ವಜ ವಿವಾದ ಪ್ರಕರಣ ಹಿನ್ನೆಲೆ ಫೆಬ್ರವರಿ 9ರಂದು ಮಂಡ್ಯ ನಗರ ಬಂದ್ಗೆ ಬಜರಂಗದಳ ಕರೆ ನೀಡಿದೆ. ನಾಳೆ ಮಂಡ್ಯದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗುತ್ತಿದ್ದು, ಕೆರಗೋಡು ಗ್ರಾಮದಿಂದ ಡಿಸಿ ಕಚೇರಿವರೆಗೂ ಪಾದಯಾತ್ರೆ ನಡೆಸಿ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧಾರ ಮಾಡಲಾಗಿದೆ.
ಸಿದ್ದರಾಮಯ್ಯ ರಾಮ, ಹನುಮ ವಿರೋಧಿ. ಈ ಹಿಂದೂಗಳ ವಿರೋಧಿ ಸರ್ಕಾರ ಉಳಿಯಬಾರದು. ಹನುಮ ಧ್ವಜ ಇಳಿಸುವುದಕ್ಕೆ ದಾಖಲೆ ಸೃಷ್ಟಿ ಮಾಡಿಕೊಂಡಿದ್ದಾರೆ. ಹನುಮ ಹುಟ್ಟಿದ ನಾಡಲ್ಲಿ ಹನುಮನಿಗೆ ಈ ಸರ್ಕಾರ ಅವಮಾನ, ದ್ರೋಹ ಮಾಡಿದೆ ಎಂದು ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ
ಬೆಳಿಗ್ಗೆ 9 ಗಂಟೆಗೆ ಒಳಗೆ ರಾಷ್ಟ್ರ ಧ್ವಜಹಾರಿಸಬೇಕು. ಆದರೆ ನಾನು ಬರ್ತೀನಿ ಎಂದು ಮಧ್ಯಾಹ್ನ 3 ಗಂಟೆಯಲ್ಲಿ ಧ್ವಜ ಹಾರಿಸಿದ್ದಾರೆ. ಪೊಲೀಸರು ಶೂ ಧರಿಸಿ ಧ್ವಜಾರೋಹಣ ನಡೆಸಿದ್ದಾರೆ. ಗೂಂಡಾಗಿರಿ, ದೌರ್ಜನ್ಯ ಎಸಗಿ, ಹನುಮ ಧ್ವಜ ಇಳಿಸಿರುವುದು ನಾಚಿಕೆಗೇಡಿನ ಸಂಗತಿ ಎಂದು ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ಮಾಡಿದ್ದಾರೆ.
ಕಳ್ಳರ ರೀತಿ ರಾತ್ರಿ ಹೊತ್ತು ಬಂದು ಧ್ವಜ ಇಳಿಸಿದ್ದಾರೆ. ದರೋಡೆ ಮಾಡುವವರ ರೀತಿ ಪೊಲೀಸರು ನಡೆದುಕೊಂಡಿದ್ದಾರೆ. ಇವತ್ತು ಮತ್ತೆ ಹನುಮ ಧ್ವಜ ಹಾರಬೇಕು. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಅಧಿಕಾರಿಗಳಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದ್ದಾರೆ.