ಬೆಂಗಳೂರು:- ಕಾರಿನ ಟೈಯಲ್ ಬ್ಲಾಸ್ಟ್ ಆಗಿ ಕಾಂಪೌಂಡ್ ಗೆ ಇನೋವಾ ಕಾರು ಗುದ್ದಿದ ಘಟನೆ ಲಾಲ್ ಬಾಗ್ ರಸ್ತೆಯಲ್ಲಿ ಜರುಗಿದೆ.
ಭಾರೀ ಅನಾಹುತವೊಂದು ತಪ್ಪಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಘಟನೆ ಜರುಗಿದೆ. ಲಾಲ್ ಬಾಗ್ ಕಡೆಯಿಂದ ಜಯನಗರ ಕಡೆ ಕಾರು ಚಾಲಕ ಹೋಗುತ್ತಿದ್ದ. ಇದ್ದಕ್ಕಿದ್ದಂತೆ ಕಾರಿನ ಟಯರ್ ಬ್ಲಾಸ್ಟ್ ಆಗಿದೆ
ಆಗ ಕಾರನ್ನು ನಿಯಂತ್ರಿಸಲು ಹೋಗಿ ಕಾರು ಗೋಡೆಗೆ ಗುಡ್ಡಿದೆ. ಕಾರು ಗುದ್ದಿದ ರಭಸಕ್ಕೆ ಕಾಂಪೌಂಡ್ ಧ್ವಂಸವಾಗಿದೆ. ನಂತರ ಪಕ್ಕದಲ್ಲಿಯೇ ಇದ್ದ ಆಟೋ ಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ವಿವಿಪುರಂ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.