ಹುಬ್ಬಳ್ಳಿ:- ಹೈಕಮಾಂಡ್ ಸೂಚಿಸಿದರೆ ಲೋಕಸಭೆಗೆ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಮೂರು ನಾಲ್ಕು ತಿಂಗಳಿಂದ ನಾನು ಪ್ರವಾಸ ಮಾಡಿದಾಗ ಅನೇಕರು ಬಿಜೆಪಿಗೆ ವಾಪಸ್ ಬರಬೇಕು ಅಂತ ಸಲಹೆ ನೀಡುತ್ತಿದ್ದರು. ಎಲ್ಲಿ ಪ್ರವಾಸ ಮಾಡಿದರೂ ನಮಗೆ ಒತ್ತಡ ಬರುತ್ತಿತ್ತು. ಹಿರಿಯರಾಗಿ ಮನೆಗೆ ಬರಬೇಕು ಎಂದು ಹೇಳುತ್ತಿದ್ದರು. ಮುಂದೆ ವಿಜಯೇಂದ್ರ ಅಧ್ಯಕ್ಷರಾದ ಮೇಲೆ ನನ್ನ ಜೊತೆ ಮಾತನಾಡಿದ್ದರು ಎಂದರು.
ರಾಷ್ಟ್ರೀಯ ನಾಯಕರು ಮನಸು ಮಾಡಿದ ಮೇಲೆ ನಾನು ದೆಹಲಿಗೆ ಹೋಗಿದ್ದೆ. ಅಮಿತ್ ಶಾ, ಜೆಪಿ ನಡ್ಡಾ ಅವರನ್ನು ಭೇಟಿಯಾದಾಗ ಹಿಂದೆ ಆಗಿರೋದನ್ನ ಮರೆತು ಬಿಡಿ ಎಂದಿದ್ದರು. ನಿಮಗೆ ಗೌರವ ಕೊಡುತ್ತೇವೆ ಎಂದು ಹೇಳಿದ್ದಾರೆ. ಹೀಗಾಗಿ ನಾನು ಬಿಜೆಪಿ ಸೇರಿದ್ದೇನೆ. ನಿನ್ನೆ ಕಾರ್ಯಕಾರಿಣಿ ಸಭೆಯಲ್ಲಿ ಅನೇಕರು ಸಿಕ್ಕಿದ್ದರು. ಎಲ್ಲರೂ ಪ್ರೀತಿ ವಿಶ್ವಾಸ ತೋರಿದರು. ನಂಗೂ ಬಹಳ ಖುಷಿಯಾಯ್ತು ಎಂದರು.
ತುಮಕೂರ, ದಾವಣಗೇರಿಯಲ್ಲಿ ನನಗೆ ಸ್ವಾಗತ ಮಾಡಿದರು. ಎಲ್ಲ ಕಡೆ ಕಾರ್ಯಕರ್ತರು ಪ್ರೀತಿ ತೋರಿದರು. ಹಾವೇರಿ ಜಿಲ್ಲೆಯಲ್ಲಿ ಅನೇಕರು ನಮಗೆ ಏನೋ ಒಂದು ಕಳೆದುಕೊಂಡ ಹಾಗೆ ಆಗಿತ್ತು. ನೀವು ಬಂದಿರೋದು ಖುಷಿಯಾಯ್ತು ಎಂದರು. ಹುಬ್ಬಳ್ಳಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಜನ ಸೇರಿದ್ದರು. ಮುನೇನಕೊಪ್ಪ ಕೂಡಾ ಜೊತೆಗಿದ್ದರು. ಅನೇಕ ಕಾರ್ಯಕರ್ತರು ಸ್ವಾಗತ ಮಾಡಿಕೊಂಡರು ಎಂದರು.
ಜಿಲ್ಲೆಯಲ್ಲಿ ಯಾವ ಬಣ ಇಲ್ಲ, ಜೋಶಿ ಬಣ ಇಲ್ಲ,ಶೆಟ್ಟರ್ ಬಣ ಇಲ್ಲ. ಬಿಜೆಪಿಯೊಂದೇ ಬಣ. ನನ್ನನ್ನು ಪಕ್ಷದ ಕಚೇರಿಕೆ ಕರೆದಿದ್ದಾರೆ. ನಾನು ಪಕ್ಷದ ಕಚೇರಿಗೆ ಹೋಗುತ್ತೇನೆ. ವಿಜಯೇಂದ್ರ ಅಧ್ಯಕ್ಷರಾದ ಮೇಲೆ ಇದೆಲ್ಲವೂ ಆಗಿದ್ದು, ಯಡಿಯೂರಪ್ಪ ಮಾರ್ಗದರ್ಶನ ಇದರಲ್ಲಿ ಆಗಿದೆ. ರಾಷ್ಟ್ರೀಯ ನಾಯಕರ ಜೊತೆ ಮಾತಾಡೋವಾಗ ಯಡಿಯೂರಪ್ಪ, ವಿಜಯೇಂದ್ರ ಮುನೇನಕೊಪ್ಪ ಇದ್ದರು. ಅಲ್ಲಿ ಯಾರ ವಿರೋಧದ ಬಗ್ಗೆ ಚರ್ಚೆ ಆಗಿಲ್ಲ ಎಂದರು.