ಮೈಸೂರು: ಕಾರು ಢಿಕ್ಕಿ ಹೊಡೆದ ಪರಿಣಾಮ ಭಾರಿ ಗಾತ್ರದ ಹುಲಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ನಡೆದಿದೆ. ಘಟನೆಯಲ್ಲಿ ಗಂಡು ಹುಲಿ ಸಾವನ್ನಪ್ಪಿದ್ದು ಅರಣ್ಯಾಧಿಕಾರಿಗಳು ಹುಲಿಯ ಮೃತದೇಹವನ್ನ ವಶಕ್ಕೆ ಪಡೆದಿದ್ದಾರೆ.
ನಿನ್ನೆ ತಡರಾತ್ರಿ ಸುಮಾರು 12 ಗಂಟೆ ವೇಳೆಗೆ ಘಟನೆ ನಡೆದಿದೆ. ಇಟಿಯೋಸ್ ಕಾರ್ ಹುಲಿಗೆ ಢಿಕ್ಕಿ ಹೊಡೆದಿದೆ.ಕಾರಿನ ಮುಂಭಾಗಕ್ಕೂ ಹಾನಿಯಾಗಿದೆ.ಘಟನೆ ನಡೆದ ಸ್ಥಳಕ್ಕೆ ಅರಣ್ಯಾಧಿಕಾರಿಗಳಾದ ಮಾಲತಿ ಪ್ರಿಯ,ಲಕ್ಷ್ಮಿನಾರಾಯಣ್,ಸುರೇಂದ್ರ ಹಾಗೂ ಇತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Home Loan: ನೀವು ಮನೆ ಖರೀದಿಗೆ ಯೋಚಿಸುತ್ತಿದ್ದೀರಾ.? ಈ ಬ್ಯಾಂಕ್ʼಗಳಲ್ಲಿ ಸಿಗುತ್ತೆ ಕಡಿಮೆ ಬಡ್ಡಿಗೆ ಗೃಹ ಸಾಲ..!
ಇತ್ತೀಚಿನ ದಿನಗಳಲ್ಲಿ ನಂಜನಗೂಡು ಹಾಗೂ ಸುತ್ತ ಮುತ್ತ ಹುಲಿ ಕಾಣಿಸಿಕೊಂಡು ಭೀತಿ ಸೃಷ್ಟಿಸಿತ್ತು.ಇದೇ ಹುಲಿ ಅಪಘಾತದಲ್ಲಿ ಸಿಲುಕಿ ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನೆರವೇರಿಸಲು ಅರಣ್ಯಾಧಿಕಾರಿಗಳು ನಿರ್ಧರಿಸಿದ್ದಾರೆ. ಅಪಘಾತವಾದ ಕಾರನ್ನ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದು ಪ್ರಯಾಣಿಕರನ್ನ ವಿಚಾರಣೆ ನಡೆಸುತ್ತಿದ್ದಾರೆ..