ಬೆಂಗಳೂರು: ಕರ್ನಾಟಕದ ನಾಲ್ಕು ಪರಿಷತ್ ಸದಸ್ಯರ ಅವಧಿ ಮುಕ್ತಾಯವಾದ ಹಿನ್ನೆಲೆ ಪರಿಷತ್ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದೆ.
15 ರಾಜ್ಯಗಳ ಪೈಕಿ 56 ಪರಿಷತ್ ಸದಸ್ಯರ ಅವಧಿ ಮುಕ್ತಾಯವಾಗಿದ್ದು, ಚುನಾವಣಾ ಆಯೋಗದಿಂದ ಪರಿಷತ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಎಪ್ರಿಲ್ 2ಕ್ಕೆ ಪರಿಷತ್ ಸದಸ್ಯರ ಅವಧಿ ಮುಕ್ತಾಯವಾಗಲಿದೆ.
ಈ ಹಿನ್ನೆಲೆ ಫೆಬ್ರವರಿ 15ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು, ಫೆ. 20ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 27 ಕ್ಕೆ ಪರಿಷತ್ ಚುನಾವಣೆಗೆ ಮತದಾನ ನಡೆಯಲಿದ್ದು, ಫೆಬ್ರವರಿ 27ರ ಸಂಜೆ 5 ಗಂಟೆಯ ಬಳಿಕ ಫಲಿತಾಂಶ ಪ್ರಕಟವಾಗಲಿದೆ.