ಬೀದರ್:-ಇಂದು ಪಕ್ಷದ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಕಾಲಿಗೆ ಬಿದ್ದ ಪ್ರಭು ಚೌಹಾಣ್, ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದರು. ಆ ಮೂಲಕ ಪರೋಕ್ಷವಾಗಿ ಖೂಬಾಗೆ ಟಿಕೆಟ್ ನೀಡುದಂತೆ ಸಂದೇಶ ರವಾನಿಸಿದರು.
ಇಂದು ಬೀದರ್ ಜಿಲ್ಲಾ ಬಿಜೆಪಿ ಅಧ್ಯಕ್ಷರ ಪದಗ್ರಹಣ ಸಮಾರಂಭ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೂಡ ಭಾಗಿಯಾಗಿದ್ದರು. ಈ ವೇಳೆ ವಿಜಯೇಂದ್ರರ ಕಾಲಿಗೆ ಬಿದ್ದ ಪ್ರಭು ಚೌಹಾಣ್, ಬೀದರ್ ಲೋಕಸಭಾ ಕ್ಷೇತ್ರದ ಟಿಕೆಟ್ ಸಾಮಾನ್ಯ ಕಾರ್ಯಕರ್ತನಿಗೆ ನೀಡುವಂತೆ ಮನವಿ ಮಾಡಿದ್ದಾರೆ. ಒಳ್ಳೆ ಕಾರ್ಯಕರ್ತನಿಗೆ ಟಿಕೆಟ್ ಕೊಡಿ ನಾವು ಗೆಲ್ಲಿಸುತ್ತೇವೆ. ಇದು ನನ್ನ ಅಭಿಪ್ರಾಯ ಅಲ್ಲ, ಸಮಸ್ತ ಕಾರ್ಯಕರ್ತರ ಅಭಿಪ್ರಾಯ ಎಂದಿದ್ದಾರೆ.
ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಬೀದರ್ ಸಂಸದರೂ ಆಗಿರುವ ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಮರು ಟಿಕೆಟ್ ನೀಡುವುದನ್ನು ವಿರೋಧಿಸುತ್ತಿರುವ ಪಕ್ಷದ ನಾಯಕರೊಂದಿಗೆ ಮುಂಬರುವ ಲೋಕಸಭೆ ಚುನಾವಣೆ ಕುರಿತು ಚರ್ಚಿಸಲು ಇತ್ತೀಚೆಗೆ ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸಲಾಗಿತ್ತು.
ಸಭೆಯಲ್ಲಿ ಕರಡಿ ಸಂಗಣ್ಣ ಅವರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮತ್ತೆ ಟಿಕೆಟ್ ನೀಡುವುದನ್ನು ಪಕ್ಷದ ಪದಾಧಿಕಾರಿಗಳು ವಿರೋಧಿಸಿದ್ದರು. ಖೂಬಾ ಸಂಸದರಾಗಿರುವ ಬೀದರ್ನಲ್ಲಿ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ವಶವಾಗಿದೆ. ಆದರೆ, ಬಿಜೆಪಿ ಶಾಸಕರು ಖೂಬಾಗೆ ಟಿಕೆಟ್ ನೀಡುವುದನ್ನು ವಿರೋಧಿಸಲಾಗುತ್ತಿದೆ.