ಬೆಂಗಳೂರು:– ರಾಮ ಮಂದಿರದ ವಿಚಾರ ಮುಂದಿಟ್ಟು ರಾಜಕಾರಣ ಮಾಡುವುದು ಸೂಕ್ತವಲ್ಲ ಎಂದು ಸಚಿವ ಕೆ ಹೆಚ್ ಮುನಿಯಪ್ಪ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ದೇವರ ಹೆಸರಿನಲ್ಲಿ ರಾಜಕೀಯ ಮಾಡುವುದು ಸೂಕ್ತವಲ್ಲ ಎಂದರು. ಮಂಡ್ಯದಲ್ಲಿ ಹನುಮ ಧ್ವಜ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ತಿರುಗೇಟು ನೀಡಿದ್ದಾರೆ. ಈ ವೇಳೆ, ದೇವರ ಹೆಸರಿನಲ್ಲಿ ರಾಜಕೀಯ ಮಾಡುವುದು ಸೂಕ್ತವಲ್ಲ. ಭಾರತ ದೇಶ ಜಾತ್ಯಾತೀತ ರಾಷ್ಟ್ರವಾಗಿದೆ. ಈ ರಾಷ್ಟ್ರದಲ್ಲಿ ಎಲ್ಲಾ ವರ್ಗದ, ಎಲ್ಲಾ ಧರ್ಮಗಳ ಜನ ಇದ್ದಾರೆ. ವ್ಯವಸ್ಥೆಯಲ್ಲಿ ಸಂವಿಧಾನ ಬದ್ಧವಾಗಿ ನಾವೆಲ್ಲ ಅಣ್ಣ-ತಮ್ಮಂದಿರಂತೆ ಬಾಳಬೇಕು ಎಂದಿದ್ದಾರೆ.
ನಾವು ಗ್ಯಾರೆಂಟಿಗಳನ್ನು ಕೊಟ್ಟು ಮತ ಕೇಳುತ್ತಿದ್ದೇವೆ. ಅವರು ನಮಗಿಂತ ಒಳ್ಳೆಯ ಕೆಲಸ ಮಾಡಿ ಮತ ಕೇಳಲಿ. ರಾಜಕೀಯ ಪಕ್ಷಗಳು ಸಿದ್ಧಾಂತದ ಮೇಲೆ ರಾಜಕಾರಣ ಮಾಡಬೇಕು. ಎಲ್ಲಾ ಪಕ್ಷಗಳಲ್ಲೂ ಎಲ್ಲಾ ಧರ್ಮದ ಜನರು ಇರುತ್ತಾರೆ. ಅವರಿಗೆ ಇಷ್ಟ ಬಂದ ದೇವರನ್ನು ಪೂಜೆ ಮಾಡುತ್ತಾರೆ. ರಾಮ ಮಂದಿರದ ವಿಚಾರ ಮುಂದಿಟ್ಟು ರಾಜಕಾರಣ ಮಾಡುವುದು ಸೂಕ್ತವಲ್ಲ ಎಂದಿದ್ದಾರೆ.