ಮಂಗಳೂರು:- ವೇಣೂರಿನಲ್ಲಿ ಸಂಬಂಧಿಸಿದ ದುರಂತಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಟಾಕಿ ತಯಾರಿಕ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.
ಮೇಣೂರಿನ ತೋಟದ ಮನೆಯಲ್ಲಿದ್ದ ಪಟಾಕಿ ಗೋಡಾನ್ನಲ್ಲಿ ಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿದ್ದ ಪ್ರಕರಣದ ನಂತರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಜಿಲ್ಲೆಯಲ್ಲಿರುವ ಎಲ್ಲಾ ಪಟಾಕಿ ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಿ ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳನ್ನು ನಿರ್ಬಂಧಿಸಿ ಅಮಾನತ್ತಿನಲಿಡಲು ಆದೇಶಿಸಲಾಗಿದೆ. ಸುಪ್ರೀಂ ಕೋರ್ಟ್ ಆದೇಶ, ಸರ್ಕಾರದ ಮಾರ್ಗಸೂಚಿ ಪಾಲನೆಯ ಮರುಪರಿಶೀಲನೆಗಾಗಿ ನಿರ್ಬಂಧ ವಿಧಿಸಲಾಗಿದೆ. ಅಲ್ಲದೆ, ಪಟಾಕಿ ತಯಾರಿಕೆ, ಮಾರಾಟ ಘಟಕಗಳ ಮರುಪರಿಶೀಲನೆಗೆ ಜಿಲ್ಲಾ ಮಟ್ಟದ ತನಿಖಾ ಸಮಿತಿ ರಚನೆ ಮಾಡಲಾಗಿದೆ.
ಮಂಗಳೂರು ಮತ್ತು ಪುತ್ತೂರು ಎಸಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಜಿಲ್ಲಾ ವ್ಯಾಪ್ತಿಯ ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳನ್ನು ತಕ್ಷಣ ಸೀಲ್ಡೌನ್ ಮಾಡಲು ಆದೇಶಿಸಲಾಗಿದೆ