ಬೆಂಗಳೂರು: ಗೋಸುಂಬೆ ಉರುಫ್ ಊಸರವಳ್ಳಿ ಕಾಂಗ್ರೆಸ್ (Congress) ಪಕ್ಷಕ್ಕೆ ಒಳಗೊಂದು ಹೊರಗೊಂದು ವೇಷ. ಈ ದೇಶದಲ್ಲಿ ಯಾವುದಾದರೂ ಛದ್ಮವೇಷಧಾರಿ ಪಕ್ಷವಿದ್ದರೆ ಅದು ಕಾಂಗ್ರೆಸ್ ಮಾತ್ರ ಎಂದು ಜೆಡಿಎಸ್ (JDS) ವಾಗ್ದಾಳಿ ನಡೆಸಿದೆ.
ಕಾಂಗ್ರೆಸ್ ಟೀಕೆಗಳಿಗೆ ಎಕ್ಸ್ ಪೋಸ್ಟ್ನಲ್ಲಿ ಪ್ರತ್ಯುತ್ತರ ನೀಡಿರುವ ಜೆಡಿಎಸ್, ಗೋಸುಂಬೆ ಉರುಫ್ ಊಸರವಳ್ಳಿ ಕಾಂಗ್ರೆಸ್ ಪಕ್ಷಕ್ಕೆ ಒಳಗೊಂದು ಹೊರಗೊಂದು ವೇಷ. ಈ ದೇಶದಲ್ಲಿ ಯಾವುದಾದರೂ ಛದ್ಮವೇಷದಾರಿ ಪಕ್ಷವಿದ್ದರೆ ಅದು ಕಾಂಗ್ರೆಸ್ ಮಾತ್ರ. ಹೆಚ್.ಡಿ.ಕುಮಾರಸ್ವಾಮಿ ಅವರು ಹಾಗಲ್ಲ. ಏನಾದರೂ ಹೇಳಬೇಕೆಂದರೆ; ನೇರ, ದಿಟ್ಟ, ನಿಷ್ಠುರ. ಏನೇ ಬಂದರೂ ಎದುರಿಸುವ ಕೆಚ್ಚು ಅವರದ್ದು, ಪಲಾಯನ ಮಾಡುವ ಪೈಕಿ ಅವರಲ್ಲ. ಎಂದು ತಿಳಿಸಿದೆ.
RSS ಬಗ್ಗೆ ಕುಮಾರಸ್ವಾಮಿ ಅವರು ಹಿಂದೆ ಮಾತನಾಡಿದ್ದಾರೆ, ಬರೆದಿದ್ದಾರೆ.. ನಿಜ. ಟೀಕೆ ಮಾಡಿದ್ದಾರೆನ್ನುವುದೂ ಹೌದು. ಹಾಗೆಯೇ, ಕಲ್ಲಡ್ಕ ಪ್ರಭಾಕರ ಭಟ್ಟರು ನಡೆಸುತ್ತಿರುವ ಶ್ರೀರಾಮ ವಿದ್ಯಾಲಯಕ್ಕೆ ಭೇಟಿ ನೀಡಿದಾಗಲೂ ಅವರು ಏನು ಹೇಳಬೇಕೋ ಅದನ್ನೇ ಹೇಳಿದ್ದಾರೆ. ಕಾಮಾಲೆ ಕಣ್ಣಿನ, ಕುತ್ಸಿತ ಕಿವಿಯ ಕಾಂಗ್ರೆಸ್ಗೆ ಅದೆಲ್ಲಾ ಗೊತ್ತಾಗುವುದೇ ಇಲ್ಲ ಎಂದು ಟಾಂಗ್ ಕೊಟ್ಟಿದೆ.