ಕ್ರಿಕೆಟಿಗ ಮೊಹಮ್ಮದ್ ಶಮಿ ಮತ್ತು ಸಾನಿಯಾ ಮಿರ್ಜಾ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೆಲ ದಿನಗಳ ಹಿಂದೆ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಆಟಗಾರ ಶೋಯೆಬ್ ಮಲಿಕ್ ಅವರಿಗೆ ವಿಚ್ಚೇದನ ನೀಡಿದ್ದರು. ಈ ಮೂಲಕ 13 ವರ್ಷದ ದಾಂಪತ್ಯ ಜೀವನವನ್ನು ಅಂತ್ಯಗೊಳಿಸಿದ್ದರು. ಇದರ ಬೆನ್ನಲ್ಲೇ ಕೆಲ ಕಿಡಿಗೇಡಿಗಳು ಕ್ರಿಕೆಟಿಗ ಮೊಹಮ್ಮದ್ ಶಮಿ ಮತ್ತು ಸಾನಿಯಾ ಮಿರ್ಜಾ ನಿಶ್ಚಿತಾರ್ಥ ಮಾಡಿಕೋಂಡಿದ್ದು, ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿದ್ದಾರೆ.
ಡೀಪ್ಫೇಕ್ ಮೂಲಕ ಶಮಿ ಮತ್ತು ಸಾನಿಯಾ ಮಿರ್ಜಾ ಅವರ ಮುಖವನ್ನು ಯಾರದ್ದೋ ಮದುವೆಯ ಫೋಟೊಗೆ ಎಡಿಟ್ ಮಾಡಿ ಶಮಿ ಮತ್ತು ಸಾನಿಯಾ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೋಂಡಿದ್ದಾರೆ ಎಂದು ಟ್ವೀಟರ್ ಎಕ್ಸ್ನಲ್ಲಿ ಕಿಡಿಗೇಡಿಗಳು ವೈರಲ್ ಮಾಡಿದ್ದಾರೆ. ಈ ಮೂಲಕ ಕೀಳು ಮಟ್ಟದ ಮನೋಭಾವ ತೋರಿದ್ದಾರೆ.
ಶಮಿ ಮತ್ತು ಸಾನಿಯಾ ಮಿರ್ಜಾ ಅವರ ಡೀಪ್ಫೇಕ್ ಫೋಟೊ ಕಂಡ ಕೆಲ ನೆಟ್ಟಿಗರು, ಈ ವಿಕೃತಿ ತೋರಿದರನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇನ್ನು ಕೆಲವರು ಖಾಸಗಿತನವನ್ನು ಗೌರವಿಸುವಂತೆ ಒತ್ತಾಯಿಸಿದ್ದಾರೆ.