ನವದೆಹಲಿ: 2024ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಲಾಗುತ್ತಿದೆ. ಈ ಸಂದರ್ಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲಖ್ಪತಿ ದೀದಿ ಯೋಜನೆ ಕುರಿತು ಪ್ರಸ್ತಾಪಿಸಿದರು.ಈ ಯೋಜನೆಯ ಮೂಲಕ 2025ರ ವೇಳೆಗೆ ಲಕ್ಷಾಂತರ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲಾಗುವುದು.
ಮೀನುಗಾರಿಕೆ ಯೋಜನೆಯನ್ನು ಉತ್ತೇಜಿಸಲು ಸರ್ಕಾರ ಕೆಲಸ ಮಾಡುತ್ತದೆ. ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಸರ್ಕಾರ 5 ಇಂಟಿಗ್ರೇಟೆಡ್ ಆಕ್ವಾ ಪಾರ್ಕ್ಗಳನ್ನು ತೆರೆಯಲಿದೆ ಎಂದು ಹೇಳಿದರು.