ಕೋಲ್ಕತಾ :- ಚಿಕ್ಕಪ್ಪನಿಂದಲೇ 11 ವರ್ಷದ ಬಾಲಕಿಯ ಶಿರಚ್ಛೇದ ನಡೆದಿದ್ದು, ಪಶ್ಚಿಮ ಬಂಗಾಳದಲ್ಲಿ ಪರಿಸ್ಥಿತಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಆರೋಪಿ ಬಾಲಕಿಯ ಶಿರಚ್ಛೇದ ಮಾಡುವ ಮೊದಲು ಆಕೆಯ ಮೇಲೆ ಅತ್ಯಾಚಾರವೆಸಗಿದ್ದನೆ ಎಂಬ ಬಗ್ಗೆ ಪೊಲೀಸರು ಈಗ ತನಿಖೆ ನಡೆಸುತ್ತಿದ್ದಾರೆ.
ಜನವರಿ 29 ರಿಂದ ನಾಪತ್ತೆಯಾಗಿದ್ದ ಬಾಲಕಿಯ ಮುಂಡ ಮತ್ತು ತಲೆ ಮಾಲ್ಡಾ ನಗರದ ಬೇರೆ ಬೇರೆ ಸ್ಥಳಗಳಲ್ಲಿ ಪತ್ತೆಯಾಗಿದೆ. ಹುಡುಗಿಯ 27 ವರ್ಷದ ಚಿಕ್ಕಪ್ಪನನ್ನು ಸಿಸಿಟಿವಿ ಫೂಟೇಜ್ ಮೂಲಕ ಪತ್ತೆಹಚ್ಚಲಾಗಿದೆ. ಹುಡುಗಿ ಕಾಣೆಯಾಗುವ ಮೊದಲು ಆತ ಹುಡುಗಿಯೊಂದಿಗೆ ಕಾಣಿಸಿಕೊಂಡಿದ್ದ.
ಆರೋಪಿ ಮೊದಲಿಗೆ ಪೊಲೀಸರನ್ನು ದಾರಿತಪ್ಪಿಸಲು ಪ್ರಯತ್ನಿಸಿದ. ಆದರೆ ನಂತರ ಆಕೆಯನ್ನು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ವ್ಯಕ್ತಿಯನ್ನು ಬಂಧಿಸಿ 12 ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆ ನಗರದಲ್ಲಿ ಭಾರೀ ಪ್ರತಿಭಟನೆಗೆ ಕಾರಣವಾಗಿದ್ದು, ಅಮಾನುಷವಾಗಿ ಕೊಲೆ ಮಾಡಿರುವ ಬಾಲಕಿಯ ಚಿಕ್ಕಪ್ಪನ ವಿರುದ್ಧ ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸಿದ್ದಾರೆ. ಘಟನೆಯನ್ನು ಖಂಡಿಸಿ ಬಿಜೆಪಿ, ತೃಣಮೂಲ ಕಾಂಗ್ರೆಸ್ ಮತ್ತು ಸಿಪಿಐ(ಎಂ) ಕೂಡ ಪ್ರತಿಭಟನಾ ರ್ಯಾಲಿಗಳು ಮತ್ತು ಮೌನ ಜಾಗರಣೆ ನಡೆಸಿದ್ದವು.