ಬೆಂಗಳೂರು: ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ (BMTC Accident) ಬಸ್ಗೆ ಮತ್ತೊಂದು ಬಲಿಯಾಗಿದೆ. ಹರಿಶ್ಚಂದ್ರ ಘಾಟ್ ಬಳಿ ಬಿಎಂಟಿಸಿ ಬಸ್ ಹರಿದು ಇಂಜಿನಿಯರ್ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ . ವಿದ್ಯಾರ್ಥಿನಿ ಕುಸುಮಿತಾ(21) ಮೃತ ದುರ್ದೈವಿಯಾಗಿದ್ದು ಅಪಘಾತದಿಂದ ವಿದ್ಯಾರ್ಥಿಗೆ ತಲೆ ಹಾಗೂ ಮುಖದ ಭಾಗಕ್ಕೆ ಬಲವಾದ ಗಾಯಗಳಾಗಿದ್ದು ಅವಳನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಪ್ರಾಣ ಹೋಗಿದೆ.
ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡ್ತಿದ್ದ ವಿದ್ಯಾರ್ಥಿನಿ ಕುಸುಮಿತಾ(21) ಅಪಘಾತಕ್ಕೆ ಬಲಿಯಾದ ವಿಧ್ಯಾರ್ಥಿನಿ.ಯಾಗಿದ್ದು ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ನಡೆದ ಬಳಿಕ ಬಸ್ ಚಾಲಕ ಪರಾರಿಯಾಗಿದ್ದಾನೆ. ಈ ರೀತಿ ಚಾಲಕರ ನಿರ್ಲಕ್ಷ್ಯಕ್ಕೆ ಎಷ್ಟು ಜನ ಅಮಾಕರು ಬಲಿಯಾಗಬೇಕೆ ಗೊತ್ತಿಲ್ಲ ಇದರ ವಗ್ಗೆ ಸಾರ್ವಜನಿಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.
‘ಕಿಲ್ಲರ್’ ಬಿಎಂಟಿಸಿ!
- ಅಕ್ಟೋಬರ್ 09 : ಬಿಎಂಟಿಸಿಗೆ ಮೂರು ವರ್ಷದ ಮಗು ಬಲಿ
- ಅಕ್ಟೋಬರ್ 14 : ಬಸ್ ಡಿಕ್ಕಿಗೆ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು
- ಅಕ್ಟೋಬರ್ 22 : ಬೈಕ್ಗೆ ಬಸ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು
- ಅಕ್ಟೋಬರ್ 29 : ಬಿಎಂಟಿಸಿ ಬಸ್ ಡಿಕ್ಕಿಗೆ ಬೈಕ್ ಸವಾರ ಬಲಿ
- ಡಿಸೆಂಬರ್ 28 : ಬಿಎಂಟಿಸಿ ಬಸ್ಗೆ ಡಿಕ್ಕಿಯಾಗಿ ಪಾದಚಾರಿ ಮಹಿಳೆ ಸಾವು