ಮುಂಬೈ:- ಇಲ್ಲಿನ 6 ಕಡೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಟ್ರಾಫಿಕ್ ಪೊಲೀಸ್ ಕಂಟ್ರೋಲ್ ರೂಂಗೆ ಬೆದರಿಕೆ ಕರೆ ಬಂದಿದೆ. ನಗರದ 6 ಸ್ಥಳಗಳಲ್ಲಿ ಬಾಂಬ್ಗಳನ್ನು ಇರಿಸಲಾಗಿದೆ ಎಂಬ ಸುದ್ದಿ ತಿಳಿದ ತಕ್ಷಣ ಮುಂಬೈ ಸಂಚಾರ ಪೊಲೀಸ್ ನಿಯಂತ್ರಣ ಕೊಠಡಿಗೆ ತಲುಪಿತ್ತು.
ಈ ಮಾಹಿತಿಯನ್ನು ತಕ್ಷಣವೇ ಮುಂಬೈ ಪೊಲೀಸರಿಗೆ ನೀಡಲಾಯಿತು. ಮಾಹಿತಿ ಪಡೆದ ಮುಂಬೈ ಪೊಲೀಸರು ಸಂದೇಶ ಕಳುಹಿಸಿದವ ಬಗ್ಗೆ ಮಾಹಿತಿ ಪತ್ತೆ ಹಚ್ಚಲು ಆರಂಭಿಸಿದ್ದಾರೆ.
ಮುಂಬೈ ನಗರದಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆಯ ಫೋನ್ ಅಥವಾ ಸಂದೇಶ ಬಂದಿರುವುದು ಇದೇ ಮೊದಲಲ್ಲ. ಈ ಮೊದಲು ಮುಂಬೈ ಪೊಲೀಸ್ ಮತ್ತು ಕಂಟ್ರೋಲ್ ರೂಂಗೆ ಬೆದರಿಕೆಗಳು ಬಂದಿವೆ. ಆದರೆ ಯಾವುದನ್ನೂ ನೆಗ್ಲೆಕ್ಟ್ ಮಾಡುವಂತಿಲ್ಲ.