ಚಿಂತಾಮಣಿ:- ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಬೈನಹಳ್ಳಿ ಗ್ರಾಮದ ನಮ್ಮೂರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು ವಿದ್ಯಾರ್ಥಿನಿಯಿಂದ ಶೌಚಗೃಹ ಕ್ಲೀನಿಂಗ್ ವಿಡಿಯೋ ವೈರಲ್ ಆಗಿದೆ.
ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶೌಚಗೃಹ ಸ್ವಚ್ಛಗೊಳಿಸಲು ಬಳಸಬಾರದು ಎಂಬ ಶಿಕ್ಷಣ ಇಲಾಖೆಯ ಆದೇಶವಿದೆ. ಆದರೆ ಈ ಆದೇಶವನ್ನು ಧಿಕ್ಕರಿಸಿ ಶಿಕ್ಷಕರು ವಿದ್ಯಾರ್ಥಿಗಳ ಕೈಯಲ್ಲಿ ಶೌಚಾಲಯ ಕ್ಲೀನಿಂಗ್ ಮಾಡಿಸಿದ್ದಾರೆ. ವಿದ್ಯಾರ್ಥಿನಿ ಶೌಚಾಲಯ ಕ್ಲೀನ್ ಮಾಡುತ್ತಿದ್ದ ವಿಡಿಯೋವನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ. ಘಟನೆಗೆ ಕಾರಣವಾದ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಸ್ಥಳೀಯರು ಇದೀಗ ಆಗ್ರಹಿಸಿದ್ದಾರೆ