ಕೇವಲ ಚಿತ್ರರಂಗಕ್ಕಷ್ಟೆ ಸೀಮಿತವಾಗಿದ್ದ ತಮಿಳು ಚಿತ್ರರಂಗದ ಸೂಪರ್ಸ್ಟಾರ್ ದಳಪತಿ ವಿಜಯ್ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ್ದಾರೆ. ಇನ್ನು ಎರಡು ತಿಂಗಳಲ್ಲಿ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು ಈ ಸಂದರ್ಭದಲ್ಲಿ ಅವರು ತಮ್ಮ ರಾಜಕೀಯ ಜೀವನ ಪ್ರವೇಶದ ಬಗ್ಗೆ ಘೋಷಣೆ ಮಾಡಿದ್ದು ಅವರ ನೂತನ ಪಕ್ಷಕ್ಕೆ ‘ತಮಿಳ್ ವೆಟ್ರಿ ಕಳಗಂ’ ಎಂದು ಹೆಸರನ್ನು ಘೋಷಿಸಿದ್ದಾರೆ.
ಸದ್ಯ ಹೊಸ ಪಕ್ಷದ ಹೆಸರು ಘೋಷಿಸಿರುವ ವಿಜಯ್ ಅವರು ತಮ್ಮ ರಾಜಕೀಯ ಜರ್ನಿಗೆ ಭದ್ರ ಬುನಾದಿ ಹಾಕುತ್ತಿದ್ದಾರೆ. ಇತ್ತೀಚೆಗೆ 200 ಸದಸ್ಯರ ಸಾಮಾನ್ಯ ಸದಸ್ಯರ ಸಭೆ ನಡೆಸಿದ್ದ ವಿಜಯ್ ಅವರು ರಾಜಕೀಯ ಪಕ್ಷದ ಹೆಸರಿಗಾಗಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಇದೀಗ ಚುನಾವಣಾ ಆಯೋಗದ ಒಪ್ಪಿಗೆ ಬಳಿಕ ಪಕ್ಷದ ಹೆಸರು ಪ್ರಕಟವಾಗಿದೆ.
ನಟ ವಿಜಯ್ ಅವರ ಆಪ್ತರು ಹೇಳುವ ಪ್ರಕಾರ, ಕೇರಳ ಮತ್ತು ಕರ್ನಾಟಕದಲ್ಲಿ ಅವರ ಬಲವಾದ ಮತ್ತು ಸಂಘಟಿತ ಅಭಿಮಾನಿಗಳನ್ನು ಗಮನಿಸಿದರೆ ಪಕ್ಷದ ವ್ಯಾಪ್ತಿಯು ತಮಿಳುನಾಡು ರಾಜ್ಯವನ್ನು ಮೀರಿ ವಿಸ್ತರಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಹೊಸ ರಾಜಕೀಯ ಪಕ್ಷ ಘೋಷಿಸಿರುವ ನಟ ವಿಜಯ್ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧಾರ ಮಾಡಿದ್ದಾರೆ. ತಮಿಳಗ ವಿಟ್ರಿ ಕಜಂ 2024ರ ಚುನಾವಣೆಯಲ್ಲಿ ಸ್ಪರ್ಧಿಸೋದಿಲ್ಲ. ಹಾಗೆಯೇ ಬೇರೆ ಪಕ್ಷಗಳಿಗೆ ಬೆಂಬಲ ನೀಡಲ್ಲ ಎಂದು ನಟ ವಿಜಯ್ ಘೋಷಿಸಿದ್ದಾರೆ. ಪಕ್ಷದ ಅಧ್ಯಕ್ಷರಾಗಿಯೂ ಆಯ್ಕೆಯಾಗಿರುವ ನಟ ವಿಜಯ್ ಅವರು ಪಕ್ಷದ ಸಾಮಾನ್ಯ ಹಾಗೂ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ. ತಮಿಳುನಾಡಿನಲ್ಲಿ 2026ಕ್ಕೆ ವಿಧಾನಸಭಾ ಚುನಾವಣೆ ಎದುರಾಗಲಿದೆ. ಆಗ ದಳಪತಿ ವಿಜಯ್ ರಾಜಕೀಯದ ಖದರ್ ಅನಾವರಣ ಆಗುವ ಸಾಧ್ಯತೆ ಇದೆ.
ವಿಜಯ್ ಅವರು ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆ(Tamil Nadu Assembly Elaction)ಯ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ವಿಜಯ್ ಅವರ ಪಕ್ಷವು 2026ರ ತಮಿಳುನಾಡು ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ನಟ ವಿಜಯ್ ಅವರು ಅವರನ್ನು ತಮ್ಮ ಪಕ್ಷದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದ್ದು, ಚುನಾವಣಾ ಆಯೋಗದಲ್ಲಿ ಪಕ್ಷದ ಹೆಸರನ್ನು ನೋಂದಣಿ ಮಾಡಿದ್ದಾರೆ. ಮಾರು 200 ಸದಸ್ಯರು ಪಾಲ್ಗೊಂಡಿದ್ದ ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.
ನಟ ವಿಜಯ್ ತಮಿಳುನಾಡು ಮತ್ತು ಕೇರಳದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ ಮತ್ತು ಹಲವಾರು ಸಾರ್ವಜನಿಕ ಕಲ್ಯಾಣ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು 2018 ರಲ್ಲಿ ತುತ್ತುಕುಡಿ ಪೊಲೀಸ್ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು, ಇದು ಅವರ ರಾಜಕೀಯ ಗಂಭೀರತೆಯನ್ನು ಸೂಚಿಸುತ್ತದೆ. ನಟ ಡಿಸೆಂಬರ್ನಲ್ಲಿ ಪ್ರವಾಹದಿಂದ ಜರ್ಜರಿತವಾಗಿರುವ ತಮಿಳುನಾಡಿನ ದಕ್ಷಿಣ ಜಿಲ್ಲೆಗಳಿಗೆ ಭೇಟಿ ನೀಡಿದ್ದರು .