ತುಮಕೂರು:- ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಹೆಸರು ವರಿಷ್ಠರು ಫೈನಲ್ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ರಾಜ್ಯದ 28 ಲೋಕಸಭಾ ಚುನಾವಣೆಯಲ್ಲಿ ಯಾರು ಸ್ಪರ್ಧೆ ಮಾಡಬೇಕೆಂದು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಕಳಿಸಲಾಗುತ್ತೆ ಎಂದಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಸೋಮಣ್ಣ ಸಂಚಾರ ವಿಚಾರವಾಗಿ ಮಾತನಾಡಿದ ಅವರು, ಕೇಂದ್ರದ ವರಿಷ್ಠರು ಒಪ್ಪಿಗೆ ಸೂಚಿಸಿದರೆ ನಮ್ಮದೇನು ಅಭ್ಯಂತರ ಇಲ್ಲ. ಸೋಮಣ್ಣ ಎಲ್ಲರಿಗಿಂತ ಹಿರಿಯರಿದ್ದಾರೆ. ಪಕ್ಷ ಒಗ್ಗಟ್ಟಾಗಿ ಎಲ್ಲಾ ತೀರ್ಮಾನ ಮಾಡುತ್ತದೆ. ತುಮಕೂರು ಲೋಕಸಭಾ ಕ್ಷೇತ್ರದಿಂದ ಸೋಮಣ್ಣ ಸ್ಪರ್ಧಿಸುವುದಕ್ಕೆ ಯಾರ ವಿರೋಧವೂ ಇಲ್ಲ ಎಂದು ಹೇಳಿದ್ದಾರೆ. ಎಷ್ಟು ಮಹಿಳೆಯರಿಗೆ ಲೋಕಸಭಾ ಚುನಾವಣೆಯ ಟಿಕೆಟ್ ಸಿಗುತ್ತೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಬರುವ ದಿನಗಳಲ್ಲಿ ನಿಮ್ಮ ಪ್ರಶ್ನೆಗೆ ಉತ್ತರ ಸಿಗುತ್ತದೆ ಎಂದು ಸುಮ್ಮನಾದರು.
ಬಡವರ ಜೊತೆಗೆ ಸರ್ಕಾರ ಚೆಲ್ಲಾಟವಾಡುತ್ತಿದೆ. ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ 40% ಅಂತಾ ಹೇಳಿದ್ದರು. ಆದರೆ ಇಂದು ಕಾಂಗ್ರೆಸ್ ಮುಖಂಡ ಶಿವರಾಮ್ರವರು ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರವೇ 40 ಕಮಿಷನ್ ಪಡೆದಿದ್ದಾರೆ ಅಂತಾ ಆರೋಪಿಸಿದ್ದಾರೆ. ಅವರ ಪಕ್ಷದ ಮುಖಂಡರು ಆರೋಪಿಸಿದ್ದಾರೆ. ಹೀಗಾಗಿ ಜನರು ಅರ್ಥಮಾಡಿಕೊಂಡು ಕೆಲಸ ಮಾಡಬೇಕಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.