ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾನಿ (LK Advani) ಅವರಿಗೆ ಭಾರತ ರತ್ನ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಪ್ರಕಟಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪ್ರತಿಷ್ಠಿತ ‘ಭಾರತ ರತ್ನ’ ಗೌರವಕ್ಕೆ ಪಾತ್ರರಾದ ಹಿರಿಯ ರಾಜಕಾರಣಿ, ಬಿಜೆಪಿ ಧೀಮಂತ ಮತ್ತು ಮಾಜಿ ಉಪಪ್ರಧಾನಿ ಶ್ರೀ ಎಲ್ ಕೆ ಅಡ್ವಾಣಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಅಭಿನಂದಿಸಿದ್ದಾರೆ.
https://x.com/hd_kumaraswamy/status/1753681114328367373?t=v3lbJlpHC6y3BiuuZwkKVw&s=08
ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪ್ರತಿಷ್ಠಿತ ‘ಭಾರತ ರತ್ನ’ ಗೌರವಕ್ಕೆ ಪಾತ್ರರಾದ ಹಿರಿಯ ರಾಜಕಾರಣಿ, ಬಿಜೆಪಿ ಧೀಮಂತ ಮತ್ತು ಮಾಜಿ ಉಪಪ್ರಧಾನಿ ಶ್ರೀ ಎಲ್ ಕೆ ಅಡ್ವಾಣಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
ಅಂತಹ ಉನ್ನತ ಮಟ್ಟದ ವ್ಯಕ್ತಿಗೆ ಈ ಅರ್ಹ ಪ್ರಶಸ್ತಿಯನ್ನು ಗುರುತಿಸಿ ಘೋಷಿಸಿದ್ದಕ್ಕಾಗಿ ಕೇಂದ್ರ ಸರ್ಕಾರ ಮತ್ತು ಪ್ರಧಾನಮಂತ್ರಿ ಶ್ರೀ @narendramodi ಅವರಿಗೆ ಧನ್ಯವಾದಗಳು.
ಭಾರತೀಯ ರಾಜಕೀಯದಲ್ಲಿ ನಿಷ್ಠೆ, ಬದ್ಧತೆ, ಸ್ನೇಹಪರತೆ ಮತ್ತು ಕಠಿಣ ಪರಿಶ್ರಮವನ್ನು ಮೈಗೂಡಿಸಿಕೊಂಡಿರುವ ಶ್ರೀ ಅಡ್ವಾಣಿ ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ