ಮೊನ್ನೆ ಸತ್ತಿದ್ದ ಪೂನಂ ಪಾಂಡೆ ನಿನ್ನೆ ಜೀವಂತವಾಗಿದ್ದು, ನಟಿ ವಿರುದ್ಧ ಕೇಸ್ ದಾಖಲಿಸಲು ಸೂಚನೆ ನೀಡಲಾಗಿದೆ.
ಗರ್ಭಕಂಠ ಕ್ಯಾನ್ಸರ್ (Cervical cancer) ಕುರಿತಂತೆ ಜಾಗೃತಿ ಮೂಡಿಸುವುದಕ್ಕಾಗಿ ವಾಮಮಾರ್ಗ ಹಿಡಿದಿರುವ ಬಾಲಿವುಡ್ ನಟಿ, ಕಾಂಟ್ರವರ್ಸಿ ಕ್ವೀನ್ ಪೂನಂ ಪಾಂಡೆಯನ್ನು ಅರೆಸ್ಟ್ ಮಾಡಬೇಕು ಎಂದು ಅಭಿಮಾನಿಗಳು ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ‘ಬಾಯ್ಕಾಟ್ ಪೂನಂ ಪಾಂಡೆ’ ಟ್ರೆಂಡ್ ಶುರು ಮಾಡಿದ್ದಾರೆ. ಈ ಬೆನ್ನಲ್ಲೇ ಪೂನಂ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಶಾಸಕ ಸತ್ಯಜೀತ್ ತಾಂಬೆ ಮುಂಬೈ ಪೊಲೀಸರಿಗೆ ಸೂಚನೆ ಕೊಟ್ಟಿದ್ದಾರೆ.
ತಮ್ಮ ಪ್ರಚಾರಕ್ಕಾಗಿ ಇಂತಹ ಸ್ಟಂಟ್ಗಳನ್ನ ಮಾಡುವಂತವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಸಾವಿನ ಸುದ್ದಿಯಿಂದ ಗರ್ಭಕಂಠ ಕ್ಯಾನ್ಸರ್ ರೋಗದ ಬಗ್ಗೆ ಜಾಗೃತಿ ಮೂಡಿಸಲು ಸಾಧ್ಯವಿಲ್ಲ. ಇದು ಕ್ಯಾನ್ಸರ್ ಸಮಸ್ಯೆಯಿಂದ ಬುದುಕುಳಿದಿರುವವರನ್ನು ಗೇಲಿ ಮಾಡಿದಂತಾಗಿದೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.