ರಾಜ್ಯ ಸರ್ಕಾರವು ಭರ್ಜರಿ ಗುಡ್ನ್ಯೂಸ್ವೊಂದನ್ನು ನೀಡಿದೆ. ಕಳೆದ ಮೂರು ವರ್ಷಗಳಿಗೂ ಹೆಚ್ಚು ಅವಧಿಯಿಂದ ರಾಜ್ಯದಲ್ಲಿ ವೇತನ ಹೆಚ್ಚಳಕ್ಕೆ ಬೇಡಿಕೆ ಇದೆ.
ಕರ್ನಾಟಕದಲ್ಲಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮಾಡಬೇಕು ಹಾಗೂ ಏಳನೇ ವೇತನ ಆಯೋಗದ ವರದಿ
ಜಾರಿ ಮಾಡಬೇಕು ಎಂದು ಹಲವು ದಿನಗಳಿಂದ ನಿರಂತರವಾಗಿ ಪ್ರತಿಭಟನೆಗಳು ನಡೆದಿವೆ.
ಇದೀಗ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಆದರೆ, ಇದಕ್ಕೆ ಹಲವರು ವಿರೋಧವನ್ನೂ ವ್ಯಕ್ತಪಡಿಸಿದ್ದಾರೆ.
ಹಳೇ ಪಿಂಚಣಿ ಯೋಜನೆ ಜಾರಿ
ರಾಜ್ಯ ಸರ್ಕಾರವು 2006 ಏಪ್ರಿಲ್ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕಾತಿಗೊಂಡ
ರಾಜ್ಯ ಸರ್ಕಾರದ ಅಂದಾಜು 13,000 ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಿದೆ.
ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ ನೌಕರರು ಮುಷ್ಕರು ಮಾಡುವ ವೇಳೆ ಸ್ಥಳಕ್ಕೆ ಭೇಟಿ
ನೀಡಿ ನಾವು ಅಧಿಕಾರಕ್ಕೆ ಬಂದ ನಂತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದೆ, ಕೊಟ್ಟ ಮಾತಿನಂತೆ ಬೇಡಿಕೆ ಈಡೇರಿಸಿದೆ
ಆದೇಶದಲ್ಲಿ ಏನಿದೆ ?
ಪ್ರಸ್ತಾವನೆಯಲ್ಲಿ ವಿವರಿಸಿದ ಅಂಶಗಳ ಹಿನ್ನೆಲೆಯಲ್ಲಿ ದಿನಾಂಕ: 01.04.2006ರ ಪೂರ್ವದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ
ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ 01.04.2006ರಂದು
ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ
(ರಾಷ್ಟ್ರೀಯ ಪಿಂಚಣಿ ಯೋಜನೆ) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಅಭಿಮತದ ಮೇರೆಗೆ
ಕೆಳಕಂಡ ಷರತ್ತುಗಳಿಗೊಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ಡ್ ಪಿಂಚಣಿ ಯೋಜನೆಯ ವ್ಯಾಪ್ತಿಗೆ ಒಳಪಡಿಸಲು ಒಪ್ಪಿಗೆ ನೀಡಿದೆ.
1. ದಿನಾಂಕ 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ
ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು
ಇಚ್ಛಿಸಿದಲ್ಲಿ ತಮ್ಮ ಅಭಿಮತವನ್ನು ನಿಗದಿತ ನಮೂನೆಯಲ್ಲಿ ದಿನಾಂಕ 30.06.2024ರೊಳಗೆ ಸಕ್ಷಮ ನೇಮಕಾತಿ
ಪ್ರಾಧಿಕಾರಕ್ಕೆ ನೇರವಾಗಿ ಸಲ್ಲಿಸತಕ್ಕದ್ದು ಈ ಆಯ್ಕೆಯನ್ನು ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ.