ಮೈಸೂರು: ಕಾಡಾನೆಯೊಂದು ದಾಳಿ ನಡೆಸಿ ರೈತರೊಬ್ಬರು ಬಲಿಯಾಗಿರುವ ಘಟನೆ ಹುಣಸೂರು ತಾಲೂಕಿನ ಮುದಗನೂರು ಗ್ರಾಮದಲ್ಲಿ
ಚಲುವಯ್ಯ (65) ಮೃತ ರೈತ ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ರಾಗಿ ಕಟಾವು ಮಾಡುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ ಎಂದು ಹೇಳಲಾಗಿದೆ. ಕಾಡಾನೆ ದಾಳಿಯಿಂದ ಸ್ಥಳದಲ್ಲೇ ರೈತ ಚಲುವಯ್ಯ ಮೃತಪಟ್ಟಿದ್ದಾರೆ.
ನಿರಂತರ ಕಾಡು ಪ್ರಾಣಿ ಹಾವಳಿಯಿಂದ ರೈತರಲ್ಲಿ ಆತಂಕ ಹೆಚ್ಚಾಗಿದೆ. ಶಾಶ್ವತ ಪರಿಹಾರಕ್ಕಾಗಿ ಗ್ರಾಮಸ್ಥರು, ರೈತರ ಒತ್ತಾಯ ಮಾಡಿದ್ದಾರೆ. ಕಾಡಾನೆಗಳ ಸಹಿತ ಕಾಡು ಪ್ರಾಣಿಗಳ ಹಾವಳಿಯಿಂದ ಮನೆಯಿಂದ ಹೊರಗೆ ಬರಲು ಭಯವಾಗುತ್ತಿದೆ. ಅರಣ್ಯ ಇಲಾಖೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ನಮ್ಮೆಲ್ಲರ ರಕ್ಷಣೆಗೆ ಬರಬೇಕು.