ರಾಮನಗರ:– ರಾಜ್ಯದ ಬಿಜೆಪಿ ಸಂಸದರು ಒಬ್ಬರು ಗಂಡಸರಲ್ಲ ಎಂದು ಬಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಜೆಪಿಯ ಸಂಸದರೆಲ್ಲರೂ ಶೋಪೀಸ್ಗಳು, ಅದರ ನಾಯಕರು ಯಾರೂ ಗಂಡಸರಲ್ಲ ಎಂದು ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ನಮ್ಮ ಹೋರಾಟ ನೋಡಿಯಾದರೂ ಬಿಜೆಪಿಯ ಗಂಡಸರು ಹೋರಾಟ ಮಾಡುತ್ತಾರಾ ನೋಡೋಣ.. ಇದರ ಅರ್ಥ ಬಿಜೆಪಿಯಲ್ಲಿ ಯಾರು ಗಂಡಸರು ಇಲ್ಲ ಅಂತ. ಈಗಿರುವ ಬಿಜೆಪಿ ಎಂಪಿಗಳು ಯಾರು ಗಂಡಸರಲ್ಲ ಎಂದು ಅರ್ಥ ಎಂದು ಬಿಜೆಪಿ ಸಂಸದರ ವಿರುದ್ಧ ವಾಗ್ದಾಳಿ ನಡೆಸಿದರು.
ಹೆಚ್ಚು ಟ್ಯಾಕ್ಸ್ ಕಟ್ಟುವ ಎರಡನೇ ರಾಜ್ಯ ನಮ್ಮದು. ನಮಗೆ ಕೊಡಬೇಕಾದ ಅನಯದಾನವನ್ನ ನಮಗೆ ಕೊಡುತ್ತಿಲ್ಲ. ಬಿಜೆಪಿಯ ಸಂಸದರು ನರೇಂದ್ರ ಮೋದಿ ಮುಂದೆ ಕೂರೋದು ಇಲ್ಲ, ಏಳೋದು ಇಲ್ಲ. ಕೇವಲ ಮೋದಿ ಹೆಸರಲ್ಲಿ ಗೆಲ್ಲುತ್ತಾರೆ. ಆದರೆ ವೈಯಕ್ತಿಕ ವರ್ಚಸ್ಸು ಇಲ್ಲ. ಪಕ್ಕದ ತಮಿಳುನಾಡು ತನ್ನ ಹಕ್ಕಿಗಾಗಿ ಮಾಡುವ ಹೋರಾಟವನ್ನ ನೋಡಿ ಕಲಿಯಲಿ. ಬಿಜೆಪಿ ಸಂಸದರೆಲ್ಲಾ ಶೋ ಪೀಸ್ ಗಳು. ಕೇವಲ ದೆಹಲಿಗೆ ಹೋಗೋದು ಟಿಎ-ಡಿಎ ತಕೊಂಡು ಬರೋದು ಅಷ್ಟೇ ಇವರ ಕೆಲಸ. ಬಿಜೆಪಿ ಎಂಪಿಗಳು, ಮಂತ್ರಿಗಳು ರಾಜ್ಯದ ಧ್ವನಿ ಎತ್ತಿಲ್ಲ. ಹಾಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದರು.
ಕೆಲವು ದಿನದ ಹಿಂದಷ್ಟೇ ಇದೇ ಮಾಗಡಿಯ ಕಾಂಗ್ರೆಸ್ ಶಾಸಕ ಎಚ್.ಸಿ. ಬಾಲಕೃಷ್ಣ ಅವರು ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸೋಲಾದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ ಎಂದು ಹೇಳಿ ವಿವಾದಕ್ಕೆ ಸಿಲುಕಿದ್ದರು. ಇದೀಗ ಬಿಜೆಪಿಯ ಸಂಸದರೆಲ್ಲರೂ ಶೋಪೀಸ್ಗಳು, ಅದರ ನಾಯಕರು ಯಾರೂ ಗಂಡಸರಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ .