ಬೆಂಗಳೂರು:- ಬಿಜೆಪಿ ಸಂಸದರು ಗಂಡಸರಲ್ಲ ಎಂದ ಬಾಲಕೃಷ್ಣಗೆ ಇಂದಿರಾ ಫೋಟೋ ಮೂಲಕ ವಿಜಯೇಂದ್ರ ಟಾಂಗ್ ಕೊಟ್ಟಿದ್ದಾರೆ.
ಇಂದಿರಾ ಗಾಂಧಿ ಅವರು ಒಬ್ಬರೇ ಕುರ್ಚಿ ಮೇಲೆ ಕುಳಿತುಕೊಂಡಿದ್ದು, ಇನ್ನುಳಿದ ಕಾಂಗ್ರೆಸ್ ನಾಯಕರು ಅವರ ಮುಂದೆ ಕೈಕಟ್ಟಿಕೊಂಡು ನಿಂತಿರುವ ಫೋಟೋವನ್ನು ಹಂಚಿಕೊಳ್ಳುವ ಮೂಲಕ ವಿಜಯೇಂದ್ರ ಅವರು ಬಾಲಕೃಷ್ಣ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಬ್ರಿಟಿಷರು ದೇಶಬಿಟ್ಟು ತೊಲಗಿದರೂ ನೆಹರೂ ಕುಟುಂಬದ ಗುಲಾಮಗಿರಿಯ ನೆರಳಲ್ಲೇ ಇರುವ ಶಾಸಕ ಬಾಲಕೃಷ್ಣನವರಂತಹ ಕಾಂಗ್ರೆಸ್ಸಿಗರು ಇಂದು ನಮ್ಮ ಪಕ್ಷದ ಸಂಸದರುಗಳನ್ನು ಕುರಿತು ನೀಡಿರುವ ಕೀಳುಮಟ್ಟದ ಹೇಳಿಕೆಗೆ ಈ ಚಿತ್ರವೇ ಉತ್ತರ ಹೇಳುತ್ತದೆ ಎಂದು ಟಾಂಗ್ ಕೊಟ್ಟಿದ್ದಾರೆ.
https://x.com/BYVijayendra/status/1754482298739954127?s=20