ಬೆಂಗಳೂರು:- ಬೆಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟಕ್ಕೆ ಸಂಚು ಮಾಡಿದ್ದ 6 ಮಂದಿ ವಿರುದ್ಧ ಎನ್ಐಎ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ.
ಕಳೆದ ಕಳೆದ ಜುಲೈನಲ್ಲಿ ಆರ್ಟಿ ನಗರದ ಮನೆ ಮೇಲೆ ದಾಳಿ ಮಾಡಿದ ಬೆಂಗಳೂರು ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಈ ವೇಳೆ ಜೀವಂತ ಗ್ರೆನೇಡ್ ಪತ್ತೆಯಾಗಿತ್ತು. ನಂತರ ಈ ಪ್ರಕರಣ ಎನ್ಐಎಗೆ ವರ್ಗಾವಣೆಯಾಗಿತ್ತು.
ಶೋಧ ಕಾರ್ಯದ ವೇಳೆ ಆರೋಪಿಗಳ ಬಳಿ 7 ನಾಡ ಪಿಸ್ತೂಲ್, 45 ಜೀವಂತ ಗುಂಡು, ಗ್ರೆನೇಡ್ ಹಾಗೂ ವಾಕಿಟಾಕಿಗಳು ಸಿಕ್ಕಿದ್ದವು. ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಮುಂದಾಗಿದ್ದರು ಎಂಬ ವಿಚಾರ ತನಿಖೆಯಿಂದ ಬಯಲಾಗಿತ್ತು. ಈ ಎಲ್ಲಾ ಅಂಶಗಳನ್ನು ಒಳಗೊಂಡು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ
ಪೌಡರ್ ರೂಪದ ಕೆಮಿಕಲ್ ಬಳಸಿ ಪೆಟ್ಟಿಗೆಯೊಂದರಲ್ಲಿ ಆರೋಪಿಗಳು ಅಡಗಿಸಿಟ್ಟಿದ್ದರು. ಈ ಬಗ್ಗೆ ಮಾಹಿತಿ ಪಡೆದ ನಂತರ ತನಿಖಾಧಿಕಾರಿಗಳು ಬಾಂಬ್ ನಿಷ್ಟ್ರೀಯ ದಳ ಮತ್ತು FSL ಅಧಿಕಾರಿಗಳ ಜೊತೆಯಲ್ಲಿ ಕಾರ್ಯಾಚರಣೆ ನಡೆಸಿ ಸಜೀವ ಗ್ರೇನೆಡ್ಗಳನ್ನ ಪತ್ತೆಮಾಡಿ ವಶಪಡಿಸಿಕೊಳ್ಳಲಾಗಿತ್ತು. ಗ್ರೆನೇಡ್ ಮೇಲಿದ್ದ ಮೇಡ್ ಇನ್ ವಿವರವನ್ನೇ ಆರೋಪಿಗಳು ಅಳಿಸಿ ಹಾಕಿದ್ದರು
ಸೆರೆ ಸಿಕ್ಕ ಶಂಕಿತರ ಉಗ್ರರ ಹಿಂದೆ ಬ್ಯಾಕ್ ಬೋನ್ ಆಗಿದ್ದ ಮಾಸ್ಟರ್ ಮೈಂಡ್ ಜುನೈದ್ ವಿದೇಶದಲ್ಲಿದ್ದುಕೊಂಡೇ ಬೆಂಗಳೂರಿನಲ್ಲಿ ಬಂಧನಕ್ಕೆ ಒಳಗಾದವರನ್ನು ಸಾಕುತ್ತಿದ್ದ, ಬೆಂಗಳೂರಿನಲ್ಲಿದ್ದವರಿಗೆ ಲಕ್ಷ ಲಕ್ಷ ರೂ. ಫಂಡಿಂಗ್ ಮಾಡ್ತಿದ್ದ. ಜೊತೆಗೆ ಏನೇನು ಮಾಡಬೇಕು ಅಂತಾ ಟ್ರೈನಿಂಗ್ ಕೊಡ್ತಿದ್ದ. ಅದಕ್ಕಾಗಿ ಬೆಂಗಳೂರಿನಲ್ಲಿ ಎಲ್ಲೆಲ್ಲಿ ಕೃತ್ಯ ಎಸಬೇಕು ಅನ್ನೋದರ ನೀಲನಕ್ಷೆಯನ್ನೂ ಸಿದ್ಧ ಮಾಡಿಕೊಂಡಿದ್ದ ಎನ್ನಲಾಗಿದೆ.