ಬೆಂಗಳೂರು: ನಾಳೆ ಕಾಂಗ್ರೆಸ್ ನಿಂದ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಹಿನ್ನೆಲೆ ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ರಾಜ್ಯದ ಎಲ್ಲಾ ಸಂಸದರು, ರಾಜ್ಯಸಭಾ ಸದಸ್ಯರು, ರಾಜ್ಯದ ಕೇಂದ್ರ ಸಚಿವರಿಗೆ ಖುದ್ದಾಗಿ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಹೋರಾಟಕ್ಕೆ ಬೆಂಬಲ ನೀಡಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಕನ್ನಡಿಗರ ಹಕ್ಕು ಮತ್ತು ಸ್ವಾಭಿಮಾನಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ ಮತ್ತು ಕನ್ನಡಿಗರ ತೆರಿಗೆ ಹಣಕ್ಕೆ ಆಗುತ್ತಿರುವ ವಂಚನೆಯ ವಿರುದ್ಧ ಹೋರಾಟಕ್ಕೆ ಎಲ್ಲರು ಒಂದಾಗೋಣ ಅಂತ ಕರೆ ಕೊಟ್ಟ ಸಿಎಂ ಸಿದ್ದರಾಮಯ್ಯ