ಚಿಕ್ಕಮಗಳೂರು:- ಲಂಚ ಸ್ವೀಕಾರ ಹಿನ್ನೆಲೆ ಚಿಕ್ಕಮಗಳೂರು KSRTC ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಸವರಾಜು ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ.
ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಯಲ್ಲೇ ಬಸ್ ಚಾಲಕನಿಂದ 10 ಸಾವಿರ ರೂ. ಲಂಚ ಸ್ವೀಕರಿಸುವಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಚಿಕ್ಕಮಗಳೂರಿನಿಂದ ಕಡೂರು ಡಿಪೋಗೆ ವರ್ಗಾವಣೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನಲೆ ಚಾಲಕ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಚಾಲಕ ನೀಡಿದ ದೂರಿನ ಮೇರೆಗೆ ದಾಳಿ ನಡೆಸಿದ್ದ ಲೋಕಾಯುಕ್ತರು, ಅಧಿಕಾರಿಯನ್ನು ಬಂಧಿಸಿದ್ದಾರೆ.