ಬಾಲಿವುಡ್ ನ ಖ್ಯಾತ ನಟ ಧಮೇಂದ್ರ ಹಾಗೂ ಹೇಮಾ ಮಾಲಿನಿ ಪುತ್ರಿ ಇಶಾ ಡಿಯೋಲ್ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ. ಉದ್ಯಮಿ ಭರತ್ ತಖ್ತಾನಿ ಜೊತೆಗಿನ 12 ವರ್ಷಗಳ ವೈವಾಹಿಕ ಜೀವನವನ್ನು ಇಶಾ ಕಡಿದುಕೊಂಡಿದ್ದಾರೆ.
ತಾವಿಬ್ಬರು ಬೇರೆಯಾಗಿರುವ ಕುರಿತು ಇಶಾ ಡಿಯೋಲ್ ಹಾಗೂ ಭರತ್ ತಖ್ತಾನಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ನಾವು ಪರಸ್ಪರ ಒಪ್ಪಿಗೆಯ ಮೇರೆಗೆ ಸೌಹಾರ್ದಯುತವಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ನಮ್ಮ ಜೀವನ ಬದಲಾಗುತ್ತಿರುವ ಈ ಸಮಯದಲ್ಲಿ ನಮ್ಮ ಇಬ್ಬರು ಮಕ್ಕಳ ಉತ್ತಮ ಹಿತಾಸಕ್ತಿ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮಹತ್ವದ್ದಾಗಿದೆ. ನಮ್ಮ ಗೌಪ್ಯತೆಯನ್ನ ಗೌರವಿಸುವುದನ್ನು ನಾವು ಪ್ರಶಂಸಿಸುತ್ತೇವೆ ಎಂದು ಇಶಾ ಡಿಯೋಲ್ ಹಾಗೂ ಭರತ್ ತಖ್ತಾನಿ ಜಂಟಿ ಹೇಳಿಕೆ ನೀಡಿದ್ದಾರೆ.
2012ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಇಶಾ ಡಿಯೋಲ್ ಹಾಗೂ ಭರತ್ ತಖ್ತಾನಿ 2017ರಲ್ಲಿ ಮೊದಲ ಮಗು ರಾಧ್ಯಗೆ ಜನ್ಮ ನೀಡಿದರು. ಬಳಿಕ 2019ರಲ್ಲಿ ಎರಡನೇ ಮಗು ಜನಿಸಿದೆ. ಇದೀಗ 12 ವರ್ಷಗಳ ದಾಂಪತ್ಯ ಜೀವನಕ್ಕೆ ಇಶಾ ಡಿಯೋಲ್- ಭರತ್ ಬ್ರೇಕ್ ಹಾಕಿದ್ದಾರೆ.