ತುಮಕೂರು: ಶಾಲೆಯಲ್ಲಿ ಊಟ ಸೇವಿಸಿ ಇಬ್ಬರು ಶಿಕ್ಷಕರು ಸೇರಿ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಸೀನಪ್ಪನಹಳ್ಳಿ ನಲ್ಲಿರುವ ಶ್ರೀ ಅಂಬಾ ಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ ಶಾಲೆಯಲ್ಲಿ ಮೊಸರನ್ನ ಸೇವಿಸಿದ್ದ ವಿದ್ಯಾರ್ಥಿಗಳು. ಮನೆಗೆ ಹೋದಾಗ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ರಾತ್ರೋರಾತ್ರಿ ಮಕ್ಕಳನ್ನ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕುಣಿಗಲ್ ತಾಲ್ಲೂಕಿನ ಹಿಪ್ಪಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಅದರಲ್ಲಿ 12 ಮಕ್ಕಳಿಗೆ ಹೆಚ್ಚಿನ ಚಿಕಿತ್ಸೆಗೆ ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶ್ರೀ ಅಂಬಾ ಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ಒಟ್ಟು 80 ವಿದ್ಯಾರ್ಥಿಗಳಿದ್ದು, ಸ್ಥಳಕ್ಕೆ ಕುಣಿಗಲ್ ಟಿಹೆಚ್ ಓ ಹಾಗೂ ಆರೋಗ್ಯಾಧಿಕಾರಿಗಳು ಭೇಟಿ, ಪರಿಶೀಲನೆ ನಡೆಸಿದ್ದಾರೆ.