ಟೀಮ್ ಇಂಡಿಯಾ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರನ್ನು ಹಿರಿಯ ವೇಗಿ ಮೊಹಮ್ಮದ್ ಶಮಿ ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ. ವಿರಾಟ್ ಕೊಹ್ಲಿ ವಿಶ್ವದ ಅತ್ಯುತ್ತಮ ಬ್ಯಾಟ್ಸ್ಮನ್ ಎಂದು ಬಣ್ಣಿಸಿದ ಶಮಿ, ನಾಯಕ ರೋಹಿತ್ ಶರ್ಮಾ ಅವರನ್ನು ಅಪಾಯಕಾರಿ ಬ್ಯಾಟ್ಸ್ಮನ್ ಎಂದು ಹೇಳಿದ್ದಾರೆ.
.ಅಂದ ಹಾಗೆ ವೈಯಕ್ತಿಕ ಕಾರಣಗಳಿಂದ ವಿರಾಟ್ ಕೊಹ್ಲಿ ಆರಂಭಿಕ ಎರಡು ಟೆಸ್ಟ್ ಪಂದ್ಯಗಳನ್ನು ವಿಥ್ಡ್ರಾ ಮಾಡಿಕೊಂಡಿದ್ದರು. ಆದರೆ, ತಮ್ಮ ಪತ್ನಿ ಎರಡನೇ ಮಗುವಿನ ಜನ್ಮ ನೀಡುವ ಸನಿಹದಲ್ಲಿದ್ದಾರೆ. ಹಾಗಾಗಿ ಕೊಹ್ಲಿ ಮುಂದಿನ ಪಂದ್ಯಗಳಲ್ಲಿ ಆಡುವ ಬಗ್ಗೆ ಇನ್ನೂ ಯಾವುದೇ ಸ್ಪಷ್ಟತೆ ಇಲ್ಲ.
ಕಳೆದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಮೊಹಮ್ಮದ್ ಶಮಿ 24 ವಿಕೆಟ್ಗಳನ್ನು ಕಬಳಿಸಿದ್ದರು. ಆ ಮೂಲಕ ಅತಿ ಹೆಚ್ಚು ವಿಕೆಟ್ಗಳನ್ನು ಪಡೆದ ಬೌಲರ್ ಎನಿಸಿಕೊಂಡಿದ್ದರು. ಅಷ್ಟೇ ಅಲ್ಲದೆ ಏಕದಿನ ವಿಶ್ವಕಪ್ ಇತಿಹಾಸದಲ್ಲಿಯೇ ಅತಿ ಹೆಚ್ಚು ವಿಕೆಟ್ಗಳನ್ನು ಪಡೆದ ಭಾರತೀಯ ಬೌಲರ್ ಎಂಬ ಸಾಧನೆ ಮಾಡಿದ್ದರು. ಇದೀಗ ಅವರು ಭಾರತ ತಂಡದ ಫಾಸ್ಟ್ ಬೌಲಿಂಗ್ ವಿಭಾಗವನ್ನು ಮುಕ್ತಕಂಠಿಂದ ಗುಣಗಾನ ಮಾಡಿದ್ದಾರೆ.