ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ವಿಜಯ್ ಆನಂದ್ ಕೊನೆಯುಸಿರೆಳೆದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ವಿಜಯ್ ನಿಧನಕ್ಕೆ ಅನೇಕರು ಕಂಬನಿ ಮಿಡಿದಿದ್ದಾರೆ.
1982ರಲ್ಲಿ ವೃತ್ತಿ ಜೀವನ ಆರಂಭವಿಸಿದ್ದ ವಿಜಯ್ ನಾಲ್ಕು ದಶಕಗಳ ಕಾಲ ಸಂಗೀತ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇಳಯರಾಜರಂಥ ದಿಗ್ಗಜರ ಮಧ್ಯೆಯೂ ತಮ್ಮ ತನವನ್ನು ಉಳಿಸಿಕೊಂಡಿದ್ದ ವಿಜಯ್ ನಿಧನ ತಮಿಳು ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ.
ರಜನಿಕಾಂತ್ ನಟನೆಯ ನಾನ್ ಆದಿಮೈ ಇಲೈ ಸೇರಿದಂತೆ ನೂರಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿರುವ ವಿಜಯ್, ತಮಿಳು, ತೆಲುಗು ಹಾಗೂ ಮಲಯಾಳಂ ಸಿನಿಮಾ ರಂಗದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು.