ವಿಜಯಪುರ:- ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಧಬಾವಿ ಕ್ರಾಸ್ ಬಳಿ ಗೂಡ್ಸ್ ವಾಹನ ಮತ್ತು ಕ್ರೂಸರ್ ಮಧ್ಯೆ ಡಿಕ್ಕಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಜರುಗಿದೆ.
ಸುನಂದಾ ಹಾದಿಮನಿ (40) ಮೃತ ರ್ದುದೈವಿ. ಇನ್ನುಳಿದಂತೆ ಇತರರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ವಿಜಯಪುರ ಗ್ರಾಮೀಣ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.