ರಣ ರೋಚಕ ಪಂದ್ಯದಲ್ಲಿ ಪಾಕ್ ಮಣಿಸಿ ಆಸ್ಟ್ರೇಲಿಯಾ ತಂಡ ಫೈನಲ್ ತಲುಪಿದೆ.
ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಅಂಡರ್ 19 ವಿಶ್ವಕಪ್ ಅಂತಿಮ ಹಂತಕ್ಕೆ ಬಂದು ನಿಂತಿದೆ. ಇಂದು ನಡೆದ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ರೋಚಕ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಕೊನೆಯ 1 ವಿಕೆಟ್ನಿಂದ ಮಣಿಸಿದ ಆಸ್ಟ್ರೇಲಿಯಾ ತಂಡ ಫೈನಲ್ ಪ್ರವೇಶಿದೆ. ಇದರೊಂದಿಗೆ ಪ್ರಶಸ್ತಿ ಸುತ್ತಿನಲ್ಲಿ ಮುಖಾಮುಖಿಯಾಗಲಿರುವ ಎರಡು ತಂಡಗಳು ಯಾವುವು ಎಂಬುದು ಖಚಿತವಾಗಿದೆ.
ಈ ಪಂದ್ಯಕ್ಕೂ ಮುನ್ನ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ್ದ ಭಾರತ ಯುವಪಡೆ ದಾಖಲೆಯ ಒಂಬತ್ತನೇ ಬಾರಿಗೆ ವಿಶ್ವಕಪ್ ಫೈನಲ್ ಪ್ರವೇಶಿಸಿತ್ತು. ಇದೀಗ ಪಾಕಿಸ್ತಾನ ತಂಡವನ್ನು ಮಣಸಿರುವ ಆಸ್ಟ್ರೇಲಿಯಾ ತಂಡ ಆರನೇ ಬಾರಿಗೆ ಅಂಡರ್ 19 ವಿಶ್ವಕಪ್ ಫೈನಲ್ಗೆ ಟಿಕೆಟ್ ಪಡೆದುಕೊಂಡಿದೆ. ಫೆಬ್ರವರಿ 11 ರಂದು ನಡೆಯಲ್ಲಿರುವ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಭಾರತ ಮುಖಾಮುಖಿಯಾಗಲಿವೆ.
ಪಾಕಿಸ್ತಾನ ನೀಡಿದ 180 ರನ್ಗಳ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಒಂಬತ್ತು ವಿಕೆಟ್ಗಳನ್ನು ಕಳೆದುಕೊಂಡು 50ನೇ ಓವರ್ನಲ್ಲಿ ಗೆಲುವಿನ ದಡ ಮುಟ್ಟಿತು. ತಂಡದ ಪರ ಆರಂಭಿಕ ಹ್ಯಾರಿ ಡಿಕ್ಸನ್ 50 ರನ್ಗಳ ಇನ್ನಿಂಗ್ಸ್ ಆಡಿದರೆ, ಆರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಆಲಿ ಪೀಕ್ 49 ರನ್ಗಳ ನಿರ್ಣಾಯಕ ಇನ್ನಿಂಗ್ಸ್ ಆಡಿದರು. ಆಸೀಸ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ರಾಫೆಲ್ ಮ್ಯಾಕ್ಮಿಲನ್ (19 ರನ್) ಹಾಗೂ ಕ್ಯಾಲಮ್ ವಿಡ್ಲರ್ (2 ರನ್) ಕೊನೆಯ ವಿಕೆಟ್ಗೆ 16 ವಿಕೆಟ್ಗಳ ಜೊತೆಯಾಟವಾಡಿ ತಂಡವನ್ನು ಗೆಲುವಿನ ದಡ ಸೇರಿಸಿದರು.