ಪುಷ್ಪ ಸಿನಿಮಾದ ಬಳಿಕ ನಟಿ ರಶ್ಮಿಕಾ ಮಂದಣ್ಣ ಸಖತ್ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಕೊಡಗಿನ ನಟಿ ಇದೀಗ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ಸದ್ಯ ರಶ್ಮಿಕಾ ಹಾಗೂ ರಣಬೀರ್ ಕಪೂರ್ ನಟನೆಯ ಅನಿಮಲ್ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ. ಇದೇ ಕಾರಣಕ್ಕೆ ರಶ್ಮಿಕಾ ತಮ್ಮ ಸಂಭಾವನೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಆಕೆ ಕೋಟಿ ಕೋಟಿ ಕೇಳುತ್ತಿದ್ದರು ನಿರ್ಮಾಪಕರು ಮಾತ್ರ ಆಕೆಯ ಹಿಂದೆಯೇ ಬಿದ್ದಿದ್ದಾರೆ. ಸದ್ಯ ರಶ್ಮಿಕಾ ಡಾರ್ಲಿಂಗ್ ಪ್ರಭಾಸ್ ಗೆ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.
‘ಅನಿಮಲ್’ ಸಿನಿಮಾದಿಂದ ಸಂದೀಪ್ ಹಾಗೂ ರಶ್ಮಿಕಾ ಒಂದಾಗಿದ್ದಾರೆ. ಹೀಗಾಗಿಯೇ ಸಂದೀಪ್ ಹೊಸ ಚಿತ್ರಕ್ಕೆ ಕನ್ನಡದ ನಟಿ ರಶ್ಮಿಕಾ ನಾಯಕಿ ಎಂದೇ ಹೇಳಲಾಗುತ್ತಿದೆ. ರಶ್ಮಿಕಾ ನಟನೆಯ ಫಿದಾ ಆಗಿರುವ ಸಂದೀಪ್ ರೆಡ್ಡಿ ವಂಗಾ ಮತ್ತೊಮ್ಮೆ ಆಕೆಯ ಜೊತೆ ಸಿನಿಮಾ ಮಾಡಲು ಮುಂದಾಗಿದ್ದಾರೆ.
ಬ್ಯಾಕ್ ಟು ಬ್ಯಾಕ್ ಸೂಪರ್ ಸ್ಟಾರ್ ನಟರಿಗೆ ಜೋಡಿಯಾಗುತ್ತಿರುವ ರಶ್ಮಿಕಾ ಇದೇ ಮೊದಲ ಭಾರಿಗೆ ಡಾರ್ಲಿಂಗ್ ಪ್ರಭಾಸ್ ಜೊತೆ ಡ್ಯೂಯೆಟ್ ಹಾಡುತ್ತಿದ್ದಾರೆ. ಇವರಿಬ್ಬರ ಕೆಮಿಸ್ಟ್ರಿ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ.