ಗದಗ: ಗದಗನ ಸರ್ಕಾರಿ ಜಿಮ್ಸ್ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ರೋಗಿಗಳಿಗೆ ಚಿಕಿತ್ಸೆ ನೀಡಿ, ಆರೈಕೆ ಮಾಡಿ ಅಂದ್ರೆ ರೀಲ್ಸ್ ನಲ್ಲಿ ಮುಳುಗಿದ್ದಾರೆ. ಹೌದು ವೈದ್ಯಕೀಯ ವಿದ್ಯಾರ್ಥಿಗಳು ಚಲಚಿತ್ರದ ಹಾಡಿಗೆ ರೀಲ್ಸ್ ಮಾಡುವ ಮೂಲಕ ಪೇಚಿಗೆ ಸಿಲುಕಿಕೊಂಡಿದ್ದಾರೆ.
ಹೌದು ವೈದ್ಯಕೀಯ ವಿದ್ಯಾರ್ಥಿಗಳು ನಟ ರವಿಚಂದ್ರ ಅವರ ಪ್ರೇಮಲೋಕ ಚಿತ್ರದ “ಹಲೋ ಮೈ ಲವ್ಲಿ ಲೇಡಿ ಹೂ ಆರ್ ಯು” ಹಾಡಿಗೆ ಮತ್ತು ಹಿಂದಿ ಚಿತ್ರ ಹಾಡಿಗೆ ಇನ್ಸ್ಟಾಗ್ರಾಮ್ನಲ್ಲಿ ರೀಲ್ಸ್ ಮಾಡಿದ್ದಾರೆ. ಇದನ್ನು ಕಂಡ ಸಾರ್ವಜನಿಕರು ರೋಗಿಗಳ ಆರೈಕೆ ಮಾಡಬೇಕಾದವರು ಈ ರೀತಿ ಆಸ್ಪತ್ರೆಯಲ್ಲಿ ರೀಲ್ಸ್ ಮಾಡುತ್ತಾ ಕುಳಿತರೆ ಹೇಗೆ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಮ್ಸ್ ಆಸ್ಪತ್ರೆಯ ಕಾರಿಡಾರ್ನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ರೀಲ್ಸ್ ಮಾಡಿರುವ ವಿಡಿಯೋ ಸಾಮಾಜಿ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ. ವಿದ್ಯಾರ್ಥಿಗಳು ಆಸ್ಪತ್ರೆ ಒಳಗೆ ಎಲ್ಲೆಂದರಲ್ಲಿ ರೀಲ್ಸ್ ಮಾಡಿದ್ದಾರೆ. ಈ ರೀಲ್ಸ್ಗಳನ್ನು ಕಂಡ ನೆಟ್ಟಿಗರು ನಿಮ್ಮ ಹುಚ್ಚಾಟಕ್ಕೆ ಬೇರೆ ಜಾಗ ಸಿಗಲಿಲ್ವಾ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.