ಮೈಸೂರು:- ಮಾಂಸದೂಟ ಮಾಡಿ ಸುತ್ತೂರು ಮಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ವಿಚಾರವಾಗಿ ಹೆಚ್ ಸಿ ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಬಿಜೆಪಿಯವರಿಗೆ ಜನರ ಮೂಲಭೂತ ಹಕ್ಕುಗಳ ಅರಿವಿಲ್ಲ. ಸಂವಿಧಾನದ ಆಶಯ ಗೊತ್ತಿಲ್ಲದವರು ಈ ರೀತಿ ಮಾತನಾಡುತ್ತಿದ್ದಾರೆ. ನಮಗೆ ಬಿಜೆಪಿಯವರೇನು ಕೋಳಿ ಕೂದಿದ್ರಾ?, ಮರಿ ಮಾಂಸ ತಂದಿದ್ರಾ? ಅಥವಾ ಲಿವರ್ ಫ್ರೈ ಮಾಡಿ ಕೊಟ್ಟಿದ್ರಾ ಎಂದು ಪ್ರಶ್ನಿಸಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಬಿಜೆಪಿಯವರು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಬೇಕು. ಅದು ಬಿಟ್ಟು ಈ ರೀತಿ ಬೇಜವಾಬ್ದಾರಿಯುತ ಹೇಳಿಕೆ ನೀಡಬಾರದು ಎಂದು ವಾಗ್ದಾಳಿ ನಡೆಸಿದರು.
ಇನ್ನೂ ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಕೇಂದ್ರದ ವಿರುದ್ಧ ರಾಜ್ಯ ಸರ್ಕಾರದ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಿ, ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಭೋಜನಕೂಟದಲ್ಲಿ ಮಾಂಸದ ಊಟ ಮಾಡಿ, ನಂತರ ನೇರವಾಗಿ ದೆಹಲಿಯಿಂದ ಮೈಸೂರಿಗೆ ಬಂದ ಸಿಎಂ, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದ ಸುತ್ತೂರು ಜಾತ್ರೆಯಲ್ಲಿ ಭಾಗವಹಿಸಿದ್ದಾರೆ. ಹೀಗೆ ಮಾಂಸದೂಟ ಮಾಡಿ ಗದ್ದುಗೆಗೆ ಭೇಟಿ ಮಾಡಿದ್ದು ಎಷ್ಟು ಸರಿ ಎಂದು ಬಿಜೆಪಿ ಪ್ರಶ್ನಿಸಿತ್ತು.