ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಾರ್ ಟಚ್ ಆಯ್ತು ಎಂದು ರಸ್ತೆಯಲ್ಲಿ ಗಲಾಟೆ ಮಾಡಿ ಕ್ಯಾಬ್ ಚಾಲಕ ಪ್ಯಾಂಟ್ ಬಿಚ್ಚಲು ಮುಂದಾಗಿದ್ದಾನೆ. ಹೌದು ನಿನ್ನೆ ರಾತ್ರಿ ನಗರದ ಹೆಬ್ಬಾಳ ಸಿಗ್ನಲ್ ಬಳಿ ಎರಡು ಕಾರುಗಳ ನಡುವೆ ಟಚ್ ಆಗಿತ್ತು. ಈ ವೇಳೆ ಕಾರಿನಿಂದ ಕೆಳಗೆ ಇಳಿದ ಕ್ಯಾಬ್ ಡ್ರೈವರ್ , ಮತ್ತೊಂದು ಕಾರಿನಲ್ಲಿದ್ದವರ ಅವಾಚ್ಯವಾಗಿ ನಿಂದಿಸಿ ಹಲ್ಲೆಗೆ ಮುಂದಾಗಿದ್ದಾನೆ.
@CPBlr Shocked and disgusted by the appalling behavior of a cab driver KA03 AJ 1333 who exposed himself on the road today on Hebbal flyover. Such indecent acts have no place in our community. Requesting swift action @DCPNEBCP to ensure the safety and decency of all road users. pic.twitter.com/a5SnzbPYds
— Gautham Azad (@Gauthamazad) February 9, 2024
ಅಷ್ಟೇ ಅಲ್ಲದೇ ಕಾರಿನಲ್ಲಿದ್ದ ಫ್ಯಾಮಿಲಿ ಮುಂದೆಯೇ ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಲು ಮುಂದಾಗಿ ದ್ದಾನೆ. ಚಾಲಕನ ವರ್ತನೆ ವಿರುದ್ಧ ಇತರೆ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದು, ಅಸಭ್ಯ ವರ್ತನೆಯ ವೀಡಿಯೋಗಳನ್ನು ತೆಗೆದ ದೂರುದಾರ ನಗರ ಪೊಲೀಸ್ ಆಯುಕ್ತರಿಗೆ ಟ್ಯಾಗ್ ಮಾಡಿ ಕ್ರಮಕ್ಕೆ ಒತ್ತಾಯಿ ಸಿದ್ದಾರೆ. ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.